ಹೆಬ್ರಿ: ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಪ್ರಯುಕ್ತ ಹೆಬ್ರಿಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಎಸ್.ಆರ್.ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ.
ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುಷ್ಮಾ (ಪ್ರಥಮ), ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶ್ರೀರಕ್ಷಾ (ಪ್ರಥಮ), ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್.ಸಿ.ಶೆಟ್ಟಿ ಮತ್ತು ವಾಸುದೇವ್ ರಕ್ಷಕ್ (ದ್ವಿತೀಯ) ಸ್ಥಾನ ಪಡೆದಿದ್ದಾರೆ.
ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್.ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿ ಸಪ್ನಾ.ಎನ್ ಶೆಟ್ಟಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.