ಹೆಬ್ರಿ: ವಿಧಾನಸಭೆ ಚುನಾವಣೆಗೆ ಯುವ ಕುಚ್ಚೂರು ಶ್ರೀಕಾಂತ್ ಪೂಜಾರಿ ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಯಾಗಲಿದ್ದಾರೆ ಎಂದು ಜೆಡಿಎಸ್ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಯೋಗೀಶ ವಿ.ಶೆಟ್ಟಿ ತಿಳಿಸಿದರು.

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಲಿರುವ ಜೆಡಿಎಸ್ ಪಂಚರತ್ನ ಯೋಜನೆಗಳ ಪ್ರಚಾರ ರಥಕ್ಕೆ ಹೆಬ್ರಿಯ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಚಾಲನೆ ನೀಡಿದ ಸಂದರ್ಭದಲ್ಲಿಅವರು ಮಾತನಾಡಿದರು.

ಕುಮಾರಸ್ವಾಮಿ ಅವರು ಜನಸಾಮಾನ್ಯರ ಮುಖ್ಯ ಮಂತ್ರಿಯಾಗಿದ್ದರು. ಜೆಡಿಎಸ್ ಬೆಂಬಲಿಸಿ ಸರ್ಕಾರದ ಮೂಲಕ ಶಕ್ತಿ ವೃದ್ಧಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಕುಚ್ಚೂರು ಶ್ರೀಕಾಂತ್ ಪೂಜಾರಿ ಮಾತನಾಡಿದರು. ಹೆಬ್ರಿ ಶ್ರೀಅನಂತ ಪದ್ಮನಾಭ ದೇವಸ್ಥಾನದಲ್ಲಿ ಅರ್ಚಕ ಮೋಹನರಾಜ ಜೋಯಿಸ್ ಪ್ರಚಾರ ರಥಕ್ಕೆ ಪೂಜೆ ನೆರವೇರಿಸಿದರು. ಜೆಡಿಎಸ್ ಉಡುಪಿ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ವಾಸುದೇವ ರಾವ್, ಮುಖಂಡ ಪ್ರವೀಣ್ ಚಂದ್ರ ಜೈನ್, ಜಯರಾಮ ಆಚಾರ್ಯ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಮೇಶ್ ಕುಂದಾಪುರ, ಯುವ ಜನತಾದಳ ಅಧ್ಯಕ್ಷ ಸಂಜಯ್, ಪ್ರಮುಖರಾದ ಸುರೇಶ್ ದೇವಾಡಿಗ ಬಜಗೋಳಿ, ಹರೀಶ್ ಮುದ್ರಾಡಿ, ರಜಾಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.