ಹಿರಿಯಡಕ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇದರ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ 2022–23ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಈಚೆಗೆ ನಡೆಯಿತು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.
ಖ್ಯಾತ ಶಿಕ್ಷಣ ತಜ್ಞ ಡಾ.ಎನ್.ಎ.ಶೆಟ್ಟಿ ಅವರು, ‘ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಆಸಕ್ತಿಯೇ ಮೂಲಮಂತ್ರವಾಗಿದ್ದು, ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಅಳವಡಿಸಿಕೊಳ್ಳಬೇಕು’ ಎಂದರು.
ಕಾರ್ಕಳದ ಎಂ.ಪಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಶ್ರೀವರ್ಮ ಅಜ್ರಿ ಎಂ ಅವರು, ಕಾಲೇಜಿಗೆ ₹50 ಸಾವಿರ ದತ್ತಿನಿಧಿ ಸ್ಥಾಪಿಸಿದ್ದು, ಈ ವರ್ಷದ ಕಾಲೇಜಿನ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿಯನ್ನು ಪಡೆದ ಪವನ್ ಶೆಟ್ಟಿ ಅವರಿಗೆ ನಗದು ಪುರಸ್ಕಾರ ಮತ್ತು ಪ್ರಮಾಣಪತ್ರ ನೀಡಿ ಗೌರವಿಸಿದರು.
ಶೈಕ್ಷಣಿಕವಾಗಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ಸಾಂಸ್ಕೃತಿಕ, ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಹಾಗೂ ನೂತನ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ನ್ಯಾಕ್ ಪ್ರಕ್ರಿಯೆಯಲ್ಲಿ ಸಹಕರಿಸಿದ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರನ್ನು ಗೌರವಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ. ಸೀಮಾ ಜಿಕೆ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರವೀಣ ಶೆಟ್ಟಿ ಸ್ವಾಗತಿಸಿದರು. ಅರ್ಥಶಾಸ್ತ್ರ ವಿಭಾಗದ ಸಹಾಯಕ ಅನಿಲ್‌ಕುಮಾರ್ ಕೆ.ಎಸ್. ವಂದಿಸಿದರು. ಕನ್ನಡ ಉಪನ್ಯಾಸಕ ರವಿಚಂದ್ರ ಬಾಯಿರಿ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
Quote - ಸಂಸ್ಕಾರಯುತ ಶಿಕ್ಷಣ ಪ್ರಸ್ತುತದ ಆದ್ಯತೆಯಾಗಬೇಕು. ಪ್ರಸ್ತುತ ಈ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯದ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಹೆಚ್ಚಿನ ಆಸಕ್ತಿ ವಹಿಸಬೇಕು ಗುರ್ಮೆ ಸುರೇಶ್ ಶೆಟ್ಟಿ ಶಾಸಕ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.