ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚ್ಚಿಲ ದೇಗುಲ:ಜಿಲ್ಲಾ ಧಾರ್ಮಿಕ ಪರಿಷತ್ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ

Last Updated 5 ಜನವರಿ 2022, 14:43 IST
ಅಕ್ಷರ ಗಾತ್ರ

ಬೆಂಗಳೂರು: ಉಡುಪಿಯ ಉಚ್ಚಿಲ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿ ನೇಮಿಸಿ ಜಿಲ್ಲಾ ಧಾರ್ಮಿಕ ಪರಿಷತ್ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಬುಧವಾರ ತಡೆ ನೀಡಿದೆ.

ಜಿಲ್ಲಾ ಧಾರ್ಮಿಕ ಪರಿಷತ್ ಆದೇಶ ಪ್ರಶ್ನಿಸಿ ದೇವಸ್ಥಾನದ ಆನುವಂಶೀಯ ಟ್ರಸ್ಟಿ ಹಾಗೂ ಅರ್ಚಕರಾಗಿದ್ದ ಯು.ಗಣೇಶ್ ಭಟ್ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠ ಬುಧವಾರ ಈ ಕುರಿತಂತೆ ಆದೇಶಿಸಿದೆ.

ಅರ್ಜಿದಾರರ ಪರ ವಕೀಲ ವಿ.ಆರ್. ಪ್ರಸನ್ನ ಅವರ ವಾದ ಆಲಿಸಿದ ನ್ಯಾಯಪೀಠ, ಅರ್ಜಿ ಕುರಿತ ಮುಂದಿನ ಆದೇಶದವರೆಗೆ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ನೇಮಕಾತಿ ಆದೇಶಕ್ಕೆ ತಡೆಯಾಜ್ಞೆ ನೀಡಿ ಆದೇಶಿಸಿದೆ.

ಪ್ರತಿವಾದಿಗಳಾದ ರಾಜ್ಯ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತ, ರಾಜ್ಯ ಧಾರ್ಮಿಕ ಪರಿಷತ್, ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್, ಜಿಲ್ಲಾಧಿಕಾರಿ, ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಟ್ರಸ್ಟಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದ್ದು, ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT