ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಜಾಬ್ ತೀರ್ಪು | ಹುಸಿಯಾದ ನಿರೀಕ್ಷೆ: ಕಾನೂನು ಹೋರಾಟ

ಹಿಜಾಬ್ ಪರವಾಗಿ ಹೋರಾಟ ಮಾಡುತ್ತಿರುವ ವಿದ್ಯಾರ್ಥಿನಿಯರ ನಿರ್ಧಾರ
Last Updated 15 ಮಾರ್ಚ್ 2022, 22:00 IST
ಅಕ್ಷರ ಗಾತ್ರ

ಉಡುಪಿ: ಹಿಜಾಬ್ ಪರವಾಗಿ ಹೈಕೋರ್ಟ್‌ ತೀರ್ಪು ಬರಬಹುದೆಂಬ ನಿರೀಕ್ಷೆ ಹುಸಿಯಾಗಿದೆ ಎಂದು ಹಿಜಾಬ್ ಪರವಾಗಿ ಕಾನೂನು ಹೋರಾಟ ನಡೆಸುತ್ತಿರುವ ವಿದ್ಯಾರ್ಥಿನಿಯರು ಮಂಗಳವಾರ ಬೇಸರ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿನಿ ಆಲ್ಮಾಸ್‌, ‘ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಸಂಬಂಧ ವಕೀಲರ ಜತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.

‘ಹಿಜಾಬ್‌ ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ, ಖುರಾನ್‌ನಲ್ಲಿ ಮುಸ್ಲಿಂ ಮಹಿಳೆ ಕಡ್ಡಾಯವಾಗಿ ತಲೆ ಹಾಗೂ ಎದೆಯ ಭಾಗವನ್ನು ಸಂಪೂರ್ಣವಾಗಿ ಮುಚ್ಚಬೇಕು ಎಂದು ಹೇಳಲಾಗಿದೆ. ಹಿಜಾಬ್ ನಮ್ಮ ಧಾರ್ಮಿಕ ಹಕ್ಕಾಗಿದ್ದು, ಯಾವುದೇ ಕಾರಣಕ್ಕೂ ಮೊಟಕುಗೊಳಿಸಲು ಬಿಡುವುದಿಲ್ಲ’ ಎಂದು ಆಲ್ಮಾಸ್‌ ಹೇಳಿದರು.

‘ಹಿಜಾಬ್ ಧರಿಸಲು ಅವಕಾಶ ಸಿಗದಿದ್ದರೆ ಕಾಲೇಜಿಗೆ ಹೋಗುವುದಿಲ್ಲ. ಹಿಜಾಬ್ ಬೇಕು, ಶಿಕ್ಷಣವೂ ಬೇಕು. ಇಸ್ಲಾಂನಲ್ಲಿ ಹಿಜಾಬ್ ಪ್ರಮುಖ ಧಾರ್ಮಿಕ ಆಚರಣೆಯಾಗಿದ್ದು, ಹಿಜಾಬ್‌ಗಾಗಿ ಕಾನೂನು ಹೋರಾಟ ಮುಂದುವರಿಸುತ್ತೇವೆ’ ಎಂದರು.

‘ರಾಜ್ಯ ಸರ್ಕಾರದ ಒತ್ತಡದಿಂದ ಹೈಕೋರ್ಟ್‌ನಲ್ಲಿ ಹಿಜಾಬ್ ವಿರುದ್ಧವಾದ ತೀರ್ಪು ಬಂದಿದೆ. ಹಿಜಾಬ್‌ಗೆ ಅನುಮತಿ ಕೋರಿ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸುತ್ತಿದ್ದಂತೆ, ಸರ್ಕಾರ ವಿವಾದವನ್ನು ದೊಡ್ಡದು ಮಾಡಿ, ನ್ಯಾಯಾಲಯದ ಮೇಲೆ ಒತ್ತಡ ಹಾಕಿದೆ’ ಎಂದು ಆಲಿಯಾ ಅಸಾದಿ ಆರೋಪಿಸಿದರು.

ಕಾಲೇಜು ಹಂತದಲ್ಲೇ ಬಗೆಹರಿಯಬಹುದಾಗಿದ್ದ ವಿವಾದವನ್ನು ರಾಜಕೀಯಗೊಳಿಸಿ ಕೋಮುವಾದ ಬೆರಸಿ, ಸಾವಿರಾರು ಮುಸ್ಲಿಂ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಬದುಕಿದ್ದರೆ ಸಂವಿಧಾನಕ್ಕೆ ಬಂದೊದಗಿರುವ ಸ್ಥಿತಿ ನೋಡಿ ಖಂಡಿತ ದುಃಖಪಡುತ್ತಿದ್ದರು ಎಂದರು. ಸುದ್ದಿಗೋಷ್ಠಿಯಲ್ಲಿ ಅಲಿಯಾ ಅಸಾದಿ, ರೇಷಮ್‌, ಮುಸ್ಕಾನ್‌, ಸಫಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT