ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಪು: ಹಿಜಾಬ್‌ಗೆ ಅನುಮತಿ ಕೋರಿ ಪೋಷಕರ ಪ್ರತಿಭಟನೆ

Last Updated 15 ಫೆಬ್ರುವರಿ 2022, 8:17 IST
ಅಕ್ಷರ ಗಾತ್ರ

ಕಾಪು (ಉಡುಪಿ): ತಾಲ್ಲೂಕಿನ ಮಲ್ಲಾರಿನ ಮೌಲಾನಾ ಆಜಾದ್ ಪ್ರೌಢಶಾಲೆಯಲ್ಲಿ ಸೋಮವಾರ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿದ ಶಾಲೆಯ ಮುಖ್ಯೋಪಾಧ್ಯಾಯರ ಕ್ರಮ ಖಂಡಿಸಿ ಮಂಗಳವಾರ ಪೋಷಕರು ಶಾಲೆ ಎದುರು ಪ್ರತಿಭಟನೆ ನಡೆಸಿದರು.

ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡ ಪೋಷಕರು ಮಕ್ಕಳಿಗೆ ತರಗತಿಯಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಬೇಕು. ನಿರಾಕರಿಸಿದರೆ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪಟ್ಟು ಹಿಡಿದರು.

ಸೋಮವಾರ ಹಿಜಾಬ್ ಧರಿಸಿ ಬಂದಿದ್ದ 20 ವಿದ್ಯಾರ್ಥಿನಿಯರು ಮಂಗಳವಾರ ಗೈರಾಗಿದ್ದಾರೆ.

ಮತ್ತೊಂದೆಡೆ, ಇದೇ ಶಾಲಾ ಆವರಣದಲ್ಲಿರುವ ಉರ್ದು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಶಿಕ್ಷಕರು ಅನುಮತಿ ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಶಾಲೆಗೆ ಭೇಟಿನೀಡಿ ಪರಿಶೀಲನೆ ನಡೆಸಿದರು.

ಸದ್ಯ ಪರಿಸ್ಥಿತಿ ತಿಳಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT