ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿರಿಯಡಕ: ವಿಚಾರಣಾಧೀನ ಖೈದಿಗಳಿಂದ ಕಾರಾಗೃಹದಲ್ಲಿ ದಾಂಧಲೆ

Published 26 ಜೂನ್ 2024, 5:45 IST
Last Updated 26 ಜೂನ್ 2024, 5:45 IST
ಅಕ್ಷರ ಗಾತ್ರ

ಹಿರಿಯಡಕ: ಹಿರಿಯಡಕ ಸಮೀಪದ ಕಾಜರಗುತ್ತುವಿನ ಜಿಲ್ಲಾ ಕಾರಾಗೃದಲ್ಲಿದ್ದ ವಿಚಾರಣಾಧೀನ ಕೈದಿಗಳಿಬ್ಬರು ಜೈಲು ಅಧೀಕ್ಷಕ, ಜೈಲರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ದಾಂಧಲೆ ನಡೆಸಿ ಬೆದರಿಕೆ ಹಾಕಿದ ಘಟನೆ ಸೋಮವಾರ ಸಂಜೆ ನಡೆದಿದೆ.

ಕಳೆದ ತಿಂಗಳು ಉಡುಪಿಯಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದ ವಿಚಾರಣಾ ಕೈದಿಗಳಾದ ಮುಹಮ್ಮದ್ ಆಶಿಕ್ ಮತ್ತು ಮಹಮ್ಮದ್ ಸಕ್ಲೇನ್ ಪಿಜನ್ ಕಾಲ್ ಸಿಸ್ಟಮ್ ಕರೆ ಮಾಡಲು ತಡವಾಯಿತೆಂದು ಹೇಳಿ ಕರ್ತವ್ಯದಲ್ಲಿದ್ದ ಜೈಲರ್ ಎಸ್.ಎ.ಶಿರೋಳ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿ ಜೋರಾಗಿ ಕೂಗಾಟ ಮಾಡಿದ್ದಲ್ಲದೆ ಅಧೀಕ್ಷಕರ ಕಚೇರಿಯಿಂದ ಕರೆದುಕೊಂಡು ಹೋಗುವಾಗ ಸಿಬ್ಬಂದಿಗಳಲ್ಲಿ ಪುನಃ ಗಲಾಟೆ ಅರಂಭಿಸಿ ಸಿಬ್ಬಂದಿಯವರನ್ನು ತಳ್ಳಿ ಕೊಠಡಿಯಲ್ಲಿದ್ದ ಬೆಂಕಿ ನಂದಿಸುವ ಯಂತ್ರವನ್ನು ತೆಗೆಯಲು ಪ್ರಯತ್ನಿಸಿ ಬಳಿಕ ಅಡುಗೆ ಕೋಣೆಯಲ್ಲಿರುವ ದೊಡ್ಡ ಸೌಟನ್ನು ಮತ್ತು ಚಾ ಮಾಡುವ ಸೌಟನ್ನು ತಂದಿಲ್ಲದೆ, ಮಹಮ್ಮದ್‌ ಸಕ್ಲೇನ್‌ ತನ್ನ ಕೊಠಡಿಯ ಮರದ ಕುರ್ಚಿಯನ್ನು ತೆಗೆದುಕೊಂಡು ಹಲ್ಲೆ ಮಾಡಲು ಪ್ರಯತ್ನಿಸಿದ್ದು ಆಗ ಸಿಬ್ಬಂದಿಗಳು ಅವರನ್ನು ಹಿಡಿದಿರುತ್ತಾರೆ. ಅಲ್ಲದೆ ಕರ್ತವ್ಯದಲ್ಲಿದ್ದ ಜೈಲು ಅಧೀಕ್ಷಕ ಸಿದ್ದರಾಮ ಪಾಟೀಲ ಹಾಗೂ ಸಿಬ್ಬಂದಿಗೆ ಹಲ್ಲೆ ಮಾಡಲು ಪ್ರಯತಿಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ಈ ಬಗ್ಗೆ ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT