ಉಡುಪಿ: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಗೃಹ ಆರೋಗ್ಯ ಯೋಜನೆಯ ಮೂಲಕ ಜನಸಾಮಾನ್ಯರ ಮನೆ ಬಾಗಿಲಿಗೆ ಆರೋಗ್ಯ ಸೇವೆಯನ್ನು ತಲುಪಿಸಿ, ಅಸಾಂಕ್ರಾಮಿಕ ರೋಗಗಳಿಂದ ಉಂಟಾಗುವ ಮರಣ ಪ್ರಮಾಣವನ್ನು ಕಡಿಮೆ ಮಾಡುವ ಗುರಿ ಹೊಂದಲಾಗಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ಸೋಮವಾರ ನಡೆದ ಗೃಹ ಆರೋಗ್ಯ ಯೋಜನೆಯ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಗೃಹ ಅರೋಗ್ಯ ಯೋಜನೆ ಕಾರ್ಯಕ್ರಮದಡಿ ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗೂ ಭೇಟಿ ನೀಡಿ 30 ವರ್ಷ ಮೇಲ್ಪಟ್ಟವರಲ್ಲಿ ಸಕ್ಕರೆ ಕಾಯಿಲೆ, ರಕ್ತದೊತ್ತಡ, ವಿವಿಧ ರೀತಿಯ ಕ್ಯಾನ್ಸರ್, ಮಾನಸಿಕ ಆರೋಗ್ಯ ಸೇರಿದಂತೆ ವಿವಿಧ ರೋಗಲಕ್ಷಣ ಇರುವವರನ್ನು ತಪಾಸಣೆ ನಡೆಸಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಚಿಕಿತ್ಸೆಗೆ ಒಳಪಡಿಸುತ್ತಾರೆ. ಹೆಚ್ಚಿನ ಚಿಕಿತ್ಸೆಗೂ ಶಿಫಾರಸು ಮಾಡಲಾಗುತ್ತದೆ ಎಂದರು.

ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜೀವನ ಶೈಲಿಯ ಬದಲಾವಣೆಯಿಂದ ಅನೇಕ ರೋಗಗಳಿಗೆ ಇಂದಿನ ನಾಗರಿಕರು ತುತ್ತಾಗುತ್ತಿದ್ದಾರೆ. ಗ್ರಾಮೀಣ ಭಾಗದವರು, ಬಡವರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ಮನಗಂಡು ಸರ್ಕಾರ ಮನೆ ಮನೆಗೂ ಆರೋಗ್ಯ ಸೇವೆ ಒದಗಿಸುತ್ತಿದೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಜಿ. ಹುಬ್ಬಳ್ಳಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್ ಉಪಸ್ಥಿತರಿದ್ದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ನಿರೂಪಿಸಿದರು.

ಆರೋಗ್ಯಕ್ಕೆ ಆದ್ಯತೆ ನೀಡಿ:

ನಮ್ಮ ಆರೋಗ್ಯ ನಮ್ಮ ಆದ್ಯತೆಯಾಗಬೇಕು. ಹಿಂದಿನ ದಿನಗಳಿಗೆ ಹೋಲಿಸಿದಾಗ ಇತ್ತೀಚಿನ ಆಹಾರ ಪದ್ಧತಿ ಒತ್ತಡದ ಜೀವನ ಶೈಲಿಯಿಂದಾಗಿ ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿವೆ. ಕೆಲವರಿಗೆ ತಮಗಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವೇ ಇರುವುದಿಲ್ಲ. ಇಂತಹ ಸಮಸ್ಯೆಗಳನ್ನು ಹೊಂದಿರುವವರನ್ನು ಅವರಿರುವ ಕಡೆಯಲ್ಲಿ ಗುರುತಿಸಿ ಸೂಕ್ತ ಚಿಕಿತ್ಸೆ ನೀಡಲು ಗೃಹ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.