ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚ್ಚಿಲ ದೇವಸ್ಥಾನಕ್ಕೆ ಸಚಿವ ಆರಗ ಜ್ಞಾನೇಂದ್ರ ಭೇಟಿ

ಮಹಿಳೆಯರಿಂದ ಪೂರ್ಣಕುಂಭ ಸ್ವಾಗತ
Last Updated 23 ನವೆಂಬರ್ 2022, 16:28 IST
ಅಕ್ಷರ ಗಾತ್ರ

ಪಡುಬಿದ್ರಿ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.

ಕಾಪು ಕ್ಷೇತ್ರ ಶಾಸಕ ಲಾಲಾಜಿ ಮೆಂಡನ್ ಜತೆಗೆ ಬಂದ ಸಚಿವರನ್ನು ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಜಿ. ಶಂಕರ್ ಸ್ವಾಗತಿಸಿದರು. ದೇವಸ್ಥಾನದ ಸುಂದರ ಕುಸುರಿ ಕೆತ್ತನೆಗಳನ್ನು ವೀಕ್ಷಿಸಿ, ಸಚಿವರು ಸಂತಸಪಟ್ಟರು. ಮಹಿಳೆಯರು ಪೂರ್ಣಕುಂಭದ ಮೂಲಕ ಸ್ವಾಗತಿಸಿದರು.

ದೇಗುಲದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ವಿಷ್ಣುಮೂರ್ತಿ ಉಪಾಧ್ಯಾಯರು ವೇದಘೋಷ, ಮಂಗಳಾಷ್ಟಕದೊಂದಿಗೆ ಭದ್ರಕಾಳಿ ಸನ್ನಿಧಿ, ಮಹಾಗಣಪತಿ ದೇವರ ದರ್ಶನ ಮಾಡಿಸಿ ಮಹಾಲಕ್ಷ್ಮಿ ಸನ್ನಿಧಿಗೆ ಕರೆ ತಂದರು.

ದಕ್ಷಿಣ ಕನ್ನಡ ಜಿಲ್ಲಾ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ಮೊಗವೀರ ಮಹಿಳಾ ಮಹಾಜನ ಸಂಘದ ಉಪಾಧ್ಯಕ್ಷೆ
ಜಾನಕಿ ಲೀಲಾಧರ್, ದೇವಸ್ಥಾನದ ಪ್ರಬಂಧಕ ಸತೀಶ್ ಅಮೀನ್ ಮಟ್ಟು, ನಾರಾಯಣ ಕರ್ಕೇರ, ದಿನೇಶ್ ಎರ್ಮಾಳು, ದಿನೇಶ್ ಮೂಳೂರು, ಮೋಹನ್ ಬಂಗೇರ, ಬಿಜೆಪಿ ಕಾಪು ಮಂಡಲಾಧ್ಯಕ್ಷ ಶ್ರೀಕಾಂತ ನಾಯಕ್, ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಮಟ್ಟು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT