ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೂಡೆ ಬೀಚ್‌ನಲ್ಲಿ ಸಿಲುಕಿ ವಿದ್ಯಾರ್ಥಿ ನೀರುಪಾಲು

Last Updated 25 ಸೆಪ್ಟೆಂಬರ್ 2022, 14:58 IST
ಅಕ್ಷರ ಗಾತ್ರ

ಉಡುಪಿ: ಹೂಡೆ ಬೀಚ್‌ನಲ್ಲಿ ಭಾನುವಾರ ಅಲೆಗಳ ಸೆಳೆತಕ್ಕೆ ಸಿಲುಕಿ ಮಣಿಪಾಲದ ಎಂಐಟಿಯ ವಿದ್ಯಾರ್ಥಿ ನಾಪತ್ತೆಯಾಗಿದ್ದಾರೆ. ಇಬ್ಬರು ವಿದ್ಯಾರ್ಥಿಗಳನ್ನು ರಕ್ಷಿಸಿ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಾರಾಂತ್ಯದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹೂಡೆ ಬೀಚ್‌ಗೆ ಬಂದಿದ್ದರು. ಸಮುದ್ರದಲ್ಲಿ ಈಜುವಾಗ ಮೂವರು ಸೆಳೆತಕ್ಕೆ ಸಿಲುಕಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಇಬ್ಬರನ್ನು ರಕ್ಷಿಸಿ ದಡಕ್ಕೆ ಕರೆತರುವಲ್ಲಿ ಯಶಸ್ವಿಯಾದರು. ಆದರೆ, ಒಬ್ಬ ವಿದ್ಯಾರ್ಥಿ ಅಲೆಗಳ ಅಬ್ಬರಕ್ಕೆ ಸಿಕ್ಕು ಕೊಚ್ಚಿಕೊಂಡು ಹೋಗಿದ್ದಾರೆ.

ಅಸ್ವಸ್ಥಗೊಂಡವರು ಹೈದರಾಬಾದ್ ಹಾಗೂ ಬೆಂಗಳೂರು ಮೂಲದ ವಿದ್ಯಾರ್ಥಿಗಳು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT