ಸೋಮವಾರ, ಅಕ್ಟೋಬರ್ 26, 2020
28 °C

ಗುಂಡು ಹಾರಿಸಿಕೊಂಡು ಹೊಟೆಲ್ ಉದ್ಯಮಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಕಾರ್ಕಳ ತಾಲ್ಲೂಕಿನ ಚಿಕ್ಕಲಬೆಟ್ಟು ಗ್ರಾಮದಲ್ಲಿ ಭಾನುವಾರ ಉದ್ಯಮಿ ಸುನೀಲ್‌ ಶೆಟ್ಟಿ (45) ಎಂಬುವರು ನಾಡ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪುಣೆಯಲ್ಲಿ ಹೋಟೆಲ್‌ ಉದ್ಯಮ ನಡೆಸುತ್ತಿದ್ದ ಸುನೀಲ್ ಶೆಟ್ಟಿ ಲಾಕ್‌ಡೌನ್ ಬಳಿಕ ವ್ಯವಹಾರದಲ್ಲಿ ತೀವ್ರ ನಷ್ಟ ಅನುಭವಿಸಿದ್ದರು. ಸಾಲದ ಹೊರೆ ಕೂಡ ಹೆಚ್ಚಾಗಿತ್ತು. ಆರ್ಥಿಕ ಸಂಕಷ್ಟದಿಂದ ಮನನೊಂದು ಮನೆಯ ಸಮೀಪದ ಗದ್ದೆಯಲ್ಲಿ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಸೋಮವಾರ ಪುಣೆಗೆ ತೆರಳುವುದಾಗಿ ಮನೆಯವರಿಗೆ ತಿಳಿಸಿದ್ದ ಸುನೀಲ್ ಶೆಟ್ಟಿ ಅಷ್ಟರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು