ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಕೋಮು ಸೌಹಾರ್ದ ಕಾಪಾಡುವ ನೆಪದಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದ್ದರೆ ಎಂದು ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ ಆರೋಪಿಸಿದೆ.

ಪೊಲೀಸ್ ಅಧಿಕಾರಿಗಳು ಮಾನವ ಹಕ್ಕುಗಳ ಉಲ್ಲಂಘನೆ ಮಾಡಿದ ವಿಷಯದಲ್ಲಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಒಕ್ಕೂಟವು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಸೋಮವಾರ ಮನವಿ ಸಲ್ಲಿಸಿದೆ.

ವಿಚಾರಣೆ ನೆಪದಲ್ಲಿ ಹಿಂದೂ ಕಾರ್ಯಕರ್ತರಿಗೆ ಮಧ್ಯರಾತ್ರಿ ದೂರವಾಣಿ ಕರೆ ಮಾಡಿ, ನೋಟಿಸ್ ನೀಡದೆ ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆಯಲಾಗುತ್ತಿದೆ ಎಂದು ಒಕ್ಕೂಟ ಹೇಳಿದೆ.

ದಶಕಗಳಿಂದ ಯಾವುದೇ ರೀತಿಯ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿಯಾಗದ ಕೂಲಿ ಕಾರ್ಮಿಕರು, ವಯಸ್ಸಾದವರಿಗೆ ವಿಚಾರಣೆ ನೆಪದಲ್ಲಿ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿದೆ.

ಹಿಂದೂ ಜನಜಾಗೃತಿ ಸಮಿತಿ ದಕ್ಷಿಣ ಕರ್ನಾಟಕ ಸಮನ್ವಯಕ ಚಂದ್ರ ಮೋಗವೀರ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡರಿಗೆ ಬೆದರಿಕೆಯ ಕರೆಗಳು ಬರುತ್ತಿದ್ದು, ಪೊಲೀಸರು ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಪಿಎಫ್ಐ ಸಂಘಟನೆಯ ಸದಸ್ಯರು ಅನ್ಯ ಸಂಘಟನೆಗಳ ಮೂಲಕ ಸಕ್ರಿಯರಾಗಿದ್ದು, ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಅವರ ಕೈವಾಡ ಇರುವ ಶಂಕೆ ಇದ್ದು, ಈ ಕುರಿತು ತನಿಖೆ ನಡೆಯಬೇಕು ಎಂದು ಹೇಳಿದರು.

ಹಿಂದೂ ಸಂಘಟನೆಗಳ ಮುಖಂಡರಿಗೆ ಬೆದರಿಕೆಯೊಡ್ಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದೂ ಅವರು ಒತ್ತಾಯಿಸಿದರು.

ಉಡುಪಿ ಅಭಿರಾಮ ಧಾಮ ಸಂಸ್ಥಾಪಕ ಸುದರ್ಶನ ಭಾರತೀಯ, ಹಿಂದೂ ಮಹಾ ಸಭಾದ ಪ್ರಮೋದ್ ಉಚ್ಚಿಲ, ಶ್ರೀರಾಮ ಸೇನೆ ಮುಖಂಡ ಜಯರಾಂ ಅಂಬೇಕಲ್ಲು, ಗುರುಪ್ರಸಾದ್ ಶೆಣೈ, ರಾಜೇಶ್ ಶೇಟ್, ರಾಘವೇಂದ್ರ ಆಚಾರ್ಯ, ನಾಗರಾಜ್, ಸೀತಾರಾಮ್ ಭಟ್, ಉಮೇಶ್ ಶೆಟ್ಟಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.