ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಒಟ್ಟು 29 ಪೊಲೀಸ್ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು.

ಈ ಚೆಕ್ ಪೋಸ್ಟ್ಗಳಲ್ಲಿ ಹಗಲು ಹಾಗೂ ರಾತ್ರಿ ಪಾಳಿಯಲ್ಲಿ ಸಿಬ್ಬಂದಿಯನ್ನು ನೇಮಕ ಮಾಡುತ್ತಿದ್ದು, ಅಲ್ಲಿನ ಸಿಬ್ಬಂದಿಯು ಮರಳು ಸಾಗಾಟ ಹಾಗೂ ಕೆಂಪು ಕಲ್ಲು, ಶಿಲೆಕಲ್ಲು ಹಾಗೂ ಎಂ ಸ್ಯಾಂಡ್ ಸಾಗಾಟ ಮಾಡುವ ಎಲ್ಲಾ ವಾಹನಗಳನ್ನು ಪರಿಶೀಲನೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಡಿ. 6ರಿಂದ ಸುಮಾರು 3,966 ವಾಹನಗಳನ್ನ ಪರಿಶೀಲನೆ ಮಾಡಲಾಗಿದೆ. 11 ವಾಹನಗಳಲ್ಲಿ ಸರ್ಕಾರಕ್ಕೆ ಯಾವುದೇ ರಾಯಧನವನ್ನು ಭರಿಸದೇ, ಯಾವುದೇ ಪರವಾನಗಿ ಇಲ್ಲದೇ ಸಾಗಾಟ ಮಾಡಿರುವುದು ಕಂಡು ಬಂದಿದೆ. ಈ ಕುರಿತು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಟ ವಾಹನವನ್ನು ಜಪ್ತಿಮಾಡಿ, ವಾಹನದ ಚಾಲಕ ಮತ್ತು ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಉಳಿದ 10 ವಾಹನಗಳನ್ನು ಮಹಜರು ಮುಖೇನ ಸ್ವಾಧೀನಪಡಿಸಿಕೊಂಡು, ಉಡುಪಿ ಗಣಿ ಇಲಾಖೆಗೆ ಮುಂದಿನ ಕ್ರಮಕ್ಕಾಗಿ ವರದಿ ಸಲ್ಲಿಸಲಾಗಿದೆ. ಗಣಿ ಇಲಾಖೆಯವರು ಆ ವಾಹನಗಳ ಆರ್.ಸಿ. ಮಾಲೀಕರಿಗೆ ಒಟ್ಟು ₹3.08 ಲಕ್ಷ ದಂಡ ವಿಧಿಸಿದ್ದಾರೆ ಎಂದೂ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.