ಬುಧವಾರ, ಆಗಸ್ಟ್ 10, 2022
25 °C

ಕರಾವಳಿಯಲ್ಲಿ ಜೂನ್ 30ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಾದ್ಯಂತ ಶನಿವಾರವೂ ಮಳೆ ಮುಂದುವರಿದೆ. ಬಿರುಗಾಳಿ ಮಳೆಗೆ ಕಾಪು ತಾಲ್ಲೂಕಿನ ಬೆಳಪು, ಮೂಡಬೆಟ್ಟು, ನಡ್ಸಾಲು, ಹೆಜಮಾಡಿ, ಬೆಳಪು ಗ್ರಾಮದಲ್ಲಿ ಮನೆಯ ಮೇಲೆ ಮರಬಿದ್ದು ಹಾನಿಯಾಗಿದೆ.

ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ಸಮುದ್ರ ಪ್ರಕ್ಷುಬ್ದಗೊಂಡಿದ್ದು ಅಲೆಗಳ ಅಬ್ಬರ ಹೆಚ್ಚಾಗಿದೆ. ಮಂಗಳೂರಿನಿಂದ ಕಾರವಾರದವರೆ ಚಾಚಿಕೊಂಡಿರುವ ಕಡಲತೀರಗಳಲ್ಲಿ 3.7 ಮೀಟರ್‌ವರೆಗೆ ದೈತ್ಯ ಅಲೆಗಳು ಏಳಬಹುದು. ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 30ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, 11.5 ಸೆಂ.ಮೀನಿಂದ 20.4 ಸೆಂ.ಮೀವರೆಗೂ ಮಳೆ ಬೀಳಬಹುದು. ಮೀನುಗಾರರು ಸಮುದ್ರಕ್ಕಿಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು