ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರ್ಕಳ: ಬಾಸ್ಕೆಟ್ ಬಾಲ್ ಟೂರ್ನಿ ಉದ್ಘಾಟನೆ

Published : 22 ಸೆಪ್ಟೆಂಬರ್ 2024, 14:10 IST
Last Updated : 22 ಸೆಪ್ಟೆಂಬರ್ 2024, 14:10 IST
ಫಾಲೋ ಮಾಡಿ
Comments

ಕಾರ್ಕಳ: ‘ಕ್ರೀಡಾ ಕ್ಷೇತ್ರ ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡಿ ಬೆಳೆಯಲು ಅವಕಾಶ ನೀಡುತ್ತದೆ’ ಎಂದು ಕುಕ್ಕುಂದೂರಿನ ಕೆ.ಎಂ.ಇ.ಎಸ್. ಪದವಿ ಪೂರ್ವ ಕಾಲೇಜಿನ ರಾಮಚಂದ್ರ ನೆಲ್ಲಿಕಾರು ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ಗಣಿತನಗರದ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್ ಬಾಲ್ ಟೂರ್ನಿ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರ್ ಅಧ್ಯಕ್ಷತೆ ವಹಿಸಿದ್ದರು. ‌ಉಡುಪಿ ಜಿಲ್ಲಾ ಕ್ರೀಡಾ ಸಂಯೋಜನಾಧಿಕಾರಿ ದಿನೇಶ್ ಕುಮಾರ್, ದೈಹಿಕ ಶಿಕ್ಷಕ ಉಪನ್ಯಾಸಕ ಸಂಘದ ಅಧ್ಯಕ್ಷ ಸತೀಶ್ ಹೆಗ್ಡೆ, ತಾಲ್ಲೂಕು ದೈಹಿಕ ಶಿಕ್ಷಕ ಉಪನ್ಯಾಸಕ ಸಂಘದ ಮೇಲ್ವಿಚಾರಕ ರವೀಂದ್ರ ಶೆಟ್ಟಿ ಇದ್ದರು.

ಸಂಸ್ಥೆಯ ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಸೌಜನ್ಯ ಹೆಗ್ಡೆ ವಂದಿಸಿದರು. ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT