ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂದಾಪುರ: ಶಿಶು ಪಾಲನಾ ಕೇಂದ್ರದ ಉದ್ಘಾಟನೆ

ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ದಿನಾಚರಣೆ
Last Updated 15 ನವೆಂಬರ್ 2022, 15:39 IST
ಅಕ್ಷರ ಗಾತ್ರ

ಕುಂದಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ ಕುಂದಾಪುರ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ತಲ್ಲೂರು ಸಹಯೋಗದಲ್ಲಿ ತಲ್ಲೂರಿನಲ್ಲಿ ಶಿಶು ಪಾಲನಾ ಕೇಂದ್ರದ ಉದ್ಘಾಟನೆ ನಡೆಯಿತು.

ಬೈಂದೂರು ಶಾಸಕರಾದ ಬಿ.ಎಂ.ಸುಕುಮಾರ್ ಶೆಟ್ಟಿ ಶಿಶುಪಾಲನಾ ಕೇಂದ್ರ ಉದ್ಘಾಟಿಸಿ ಶುಭ ಹಾರೈಸಿದರು. ವಿಶೇಷ ಮಕ್ಕಳಿಗೆ ಮುತುವರ್ಜಿಯಿಂದ ಶಿಕ್ಷಣ ನೀಡುತ್ತಿರುವ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು.

ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಹೊಳ್ಳ ಮಾತನಾಡಿ, ವಿಶೇಷ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಹೂರ ತರುವ ಅಗತ್ಯವಿದೆ ಎಂದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಶಿಶು ಪಾಲನಾ ಕೇಂದ್ರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ತಲ್ಲೂರು ಪಂಚಾಯಿತಿ ಅಧ್ಯಕ್ಷೆ ಭೀಮವ್ವ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರತ್ನ ಹಾಗೂ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು ಉಪಸ್ಥಿತರಿದ್ದರು. ಸಹ ಶಿಕ್ಷಕಿ ದೀಪಾ ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರುತಿ ವಂದಿಸಿದರು. ಮುಖ್ಯ ಶಿಕ್ಷಕಿ ಪ್ರೇಮಾ ಕಾರ್ಯಕ್ರಮ ನಿರೂಪಿಸಿದರು.

ಮಕ್ಕಳ ದಿನಾಚರಣೆ ಪ್ರಯುಕ್ತ ಶಿಕ್ಷಕರು ಮತ್ತು ಪೋಷಕರಿಂದ ವಿಶೇಷ ಮಕ್ಕಳಿಗೆ ಮನೋರಂಜನಾ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT