ಕಾಪು (ಪಡುಬಿದ್ರಿ): ಕೃಷಿ ಕ್ಷೇತ್ರದಲ್ಲಿ ಉತ್ಪಾದನೆ ಹೆಚ್ಚಿಸಿ, ಸಾಧನೆ ಮಾಡಿ ದೇಶದ ಆರ್ಥಿಕತೆ, ಅಭಿವೃದ್ಧಿಯಲ್ಲಿ ಕೊಡುಗೆ ನೀಡಬೇಕೆಂದು ರೈತರಿಗೆ, ರೈತ ಮಹಿಳೆಯರಿಗೆ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮ ಕರೆ ನೀಡಿದರು.
ಕಾಪು ಮಂಡಲ ಬಿಜೆಪಿ ರೈತ ಮೋರ್ಚಾದ ವತಿಯಿಂದ ಶನಿವಾರ ಕೃಷಿ ಮಾಹಿತಿ ಶಿಬಿರದಲ್ಲಿ ಮಾತನಾಡಿದರು.
ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್ ಬಿಜೆಪಿಯ ಸದಸ್ಯತ್ವ ನೋಂದಣಿ ಬಗ್ಗೆ ಮಾಹಿತಿ
ನೀಡಿದರು.
ಕೃಷಿ ಕೇಂದ್ರದಲ್ಲಿ ಸಾಧನೆಗೈದ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮ ಅವರನ್ನು ಸನ್ಮಾನಿಸಲಾಯಿತು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಂಡಲ ರೈತ ಮೋರ್ಚಾ ಅಧ್ಯಕ್ಷ ಕೃಷ್ಣ ರಾವ್, ಪ್ರಧಾನ ಕಾರ್ಯದರ್ಶಿ ಕೇಶವ ಮೊಯ್ಲಿ, ಉಪಾಧ್ಯಕ್ಷ ಚಂದ್ರಹಾಸ್ ಕೋಟ್ಯಾನ್, ಕೋಶಾಧಿಕಾರಿ ಗಿರೀಶ್ ಪಾಂಗಾಳ, ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಗುರುರಾಜ್, ಪ್ರಧಾನ ಕಾರ್ಯದರ್ಶಿ ಸಂಧ್ಯಾ ಕಾಮತ್, ಹರೀಶ್ ಕುಲಾಲ್, ಜನ ಪ್ರತಿನಿಧಿಗಳು, ಪ್ರಮುಖರು ಇದ್ದರು.