ಭಾನುವಾರ, ಸೆಪ್ಟೆಂಬರ್ 19, 2021
31 °C
ರಾಜಕೀಯ ಪಕ್ಷ, ಸಂಘ, ಸಂಸ್ಥೆಗಳ ಕಚೇರಿಯಲ್ಲಿ ಧ್ವಜಾರೋಹಣ

ಉಡುಪಿ: ಎಲ್ಲೆಡೆ ಸ್ವಾತಂತ್ರ್ಯೋತ್ಸವ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಜಿಲ್ಲೆಯಾದ್ಯಂತ ಭಾನುವಾರ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲಾ ಬಿಜೆಪಿ ಕಚೇರಿ ಆವರಣದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಯುವ ಮೋರ್ಚಾ ನೇತೃತ್ವದಲ್ಲಿ ಬೃಹತ್ ಸೈಕಲ್ ಜಾಥಾ ಹಾಗೂ ಮಹಿಳಾ ಮೋರ್ಚಾದಿಂದ ವಾಹನ ಜಾಥಾ ನಡೆಯಿತು.

ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್, ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸಲೀಂ ಅಂಬಾಗಿಲು, ಮುಖಂಡರಾದ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ಗಿರೀಶ್ ಅಂಚನ್, ಶಿವಕುಮಾರ್ ಅಂಬಲಪಾಡಿ ಇದ್ದರು.

ಕಾಂಗ್ರೆಸ್‌ನಿಂದ ಸ್ವಾತಂತ್ರ್ಯೋತ್ಸವ: ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್‌ ಸಮಿತಿ ಹಾಗೂ ಸೇವಾದಳ ಸ್ವಾತಂತ್ರ್ಯೋತ್ಸವ ಆಚರಿಸಿತು. ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಧ್ವಜಾರೋಹಣ ಮಾಡಿದರು.

ಮುಖಂಡರಾದ ದಿನೇಶ್ ಪುತ್ರನ್, ಬಿ. ನರಸಿಂಹ ಮೂರ್ತಿ, ಭಾಸ್ಕರ್ ರಾವ್ ಕಿದಿಯೂರು, ಪ್ರಖ್ಯಾತ್ ಶೆಟ್ಟಿ, ಶಬ್ಬೀರ್ ಅಹ್ಮದ್, ಹರೀಶ್ ಕಿಣಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಉದ್ಯಾವರ ನಾಗೇಶ್ ಕುಮಾರ್, ಕಿಶೋರ್ ಎರ್ಮಾಳ್, ಹಬೀಬ್ ಅಲಿ, ಕೀರ್ತಿ ಶೆಟ್ಟಿ, ಸದಾಶಿವ ಕಟ್ಟೆಗುಡ್ಡೆ, ಯತೀಶ್ ಕರ್ಕೆರಾ ಇದ್ದರು.

ನಗರದ ಕ್ಲಾಕ್ ಟವರ್ ಗಾಂಧಿ ಚೌಕದ ಬಳಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಧ್ವಜಾರೋಹಣ ನೆರವೇರಿಸಿದರು.

ಉಡುಪಿ ಜಿಲ್ಲಾ ಜೆಡಿಎಸ್‌ ಕಚೇರಿಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಯೋಗೀಶ್ ವಿ.ಶೆಟ್ಟಿ ಧ್ವಜಾರೋಹಣ ಮಾಡಿದರು. ಮುಖಂಡರಾದ ಜಯಕುಮಾರ್ ಪರ್ಕಳ, ವಾಸುದೇವರಾವ್, ಜಯರಾಮ ಆಚಾರ್ಯ, ಬಾಲಕೃಷ್ಣ ಆಚಾರ್ಯ, ಪ್ರಕಾಶ್ ಶೆಟ್ಟಿ ಬೆಳ್ಳಂಪಳ್ಳಿ ,ಇಕ್ಬಾಲ್ ಅತ್ರಾಡಿ ಇದ್ದರು.

ಮುನಿಯಾಲು ಆಯುರ್ವೇದ ಕಾಲೇಜಿನಲ್ಲಿ ಹಿರಿಯ ಪತ್ರಕರ್ತ ಮೋಹನ್‌ಚಂದ್ರ ನಂಬಿಯಾರ್ ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ವಿ.ಶೆಟ್ಟಿ , ಪ್ರಾಂಶುಪಾಲರಾದ ಡಾ.ಬಿ.ಸತ್ಯನಾರಾಯಣ  ಇದ್ದರು.

ಉದ್ಯಾವರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನಲ್ಲಿ ಸಿಟಿ ಆಸ್ಪತ್ರೆ ಹಿರಿಯ ಸರ್ಜನ್‌ ಡಾ.ಕ್ಯಾಪ್ಟನ್ ಎಲ್.ರಾಮಚಂದ್ರ ಧ್ವಜಾರೋಹಣ ಮಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ವಿ. ಮಮತಾ, ದೈಹಿಕ ಶಿಕ್ಷಕ ಆದರ್ಶ್ ಶೆಟ್ಟಿ, ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್, ಸ್ನಾತಕೋತ್ತರ ವಿಭಾಗದ ಡೀನ್ ಡಾ. ನಿರಂಜನ್ ರಾವ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ವೀರಕುಮಾರ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ವಿದ್ಯಾಲಕ್ಷ್ಮೀ, ಎಸ್.ಡಿ.ಎಂ ಆಯುರ್ವೇದ ಫಾರ್ಮಸಿಯ ಜನರಲ್ ಮ್ಯಾನೇಜರ್ ಡಾ. ಮುರಳೀಧರ ಆರ್.ಬಲ್ಲಾಳ್ ಇದ್ದರು.

ಎಂಜಿಎಂ ಕಾಲೇಜಿನಲ್ಲಿ ಪ್ರಾಂಶುಪಾಲ ಡಾ. ದೇವಿದಾಸ್ ನಾಯಕ್ ಧ್ವಜಾರೋಹಣ ನೆರವೇರಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಎ. ಮಾಲತಿ ದೇವಿ, ನಿವೃತ್ತ ಪ್ರಾಂಶುಪಾಲ ಡಾ.ಎಂ.ಜಿ.ವಿಜಯ ಇದ್ದರು.

ಸರ್ಪಗಂಧಿ ಗಿಡ ನೆಡುವ ಮೂಲಕ 75 ಅಪರೂಪದ ಔಷಧ ಸಸ್ಯಗಳ ಹರ್ಬಲ್ ಪಾರ್ಕ್ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಉಡುಪಿ ಪರಿಸರದ ಹಕ್ಕಿಗಳ ಸಚಿತ್ರ ಫಲಕವನ್ನು ಅನಾವರಣಗೊಳಿಸಲಾಯಿತು. ‌

ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು ಧ್ವಜಾರೋಹಣ ಮಾಡಿದರು. ಐಕ್ಯೂಎಸಿ ಸಂಚಾಲಕ ಡಾ. ಸುರೇಶ್ ರೈ, ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಅಧ್ಯಕ್ಷ ಪ್ರಧ್ಯುಮ್ನ ಇದ್ದರು.

ಮಣಿಪಾಲದ ಮಾಧವ ಕೃಪಾ ಶಾಲೆಯಲ್ಲಿ ಸಂಚಾಲಕ ಪಿ.ಜಿ. ಪಂಡಿತ್ ಧ್ವಜಾರೋಹಣ ನೆರವೇರಿಸಿದರು. ಪ್ರಾಂಶುಪಾಲೆ ಜೆಸ್ಸಿ ಆ್ಯಂಡ್ರ್ಯೂವ್ಸ್, ಉಪ ಪ್ರಾಂಶುಪಾಲೆ ಶಕಿಲಾಕ್ಷಿ ಕೃಷ್ಣ, ಜ್ಯೋತಿ ಸಂತೋಷ್‌, ಮುಖ್ಯೋಪಾಧ್ಯಾಯಿನಿ ಆಶಾ ನಾಯಕ್ ಅಮ್ಮುಂಜೆ ಇದ್ದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ ಧ್ವಜಾರೋಹಣ ನೆರವೇರಿಸಿದರು. ಪ್ರಾಧಿಕಾರದ ಸದಸ್ಯರಾದ ಕಪ್ಪೆಟ್ಟು ಪ್ರವೀಣ ಶೆಟ್ಟಿ, ಕಿಶೋರ್ ಕರಂಬಳ್ಳಿ, ಪ್ರಭಾಕರ ಪೂಜಾರಿ, ಸುಮಾ ನಾಯ್ಕ, ನಗರ ಯೋಜನಾ ಸದಸ್ಯರಾದ ಗುರುಪ್ರಸಾದ್, ಅಧಿಕಾರಿಗಳಾದ ನಯೀಮಾ ಸಯೀದ್, ಶ್ವೇತಾ ಇದ್ದರು.

ವಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಎಸ್‍ಡಿಎಂಸಿ ಉಪಾಧ್ಯಕ್ಷ ಶ್ಯಾಂ ಪ್ರಸಾದ್ ಕುಡ್ವ ಧ್ವಜಾರೋಹಣವನ್ನು ನೆರವೇರಿಸಿದರು. ಇದೇವೇಳೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ಅಂಕಪಡೆದ ವಿದ್ಯಾರ್ಥಿ ಅಭಿಷೇಕ್ ಜಯಂತ್ ಹೊಳ್ಳ ಅವರನ್ನು ಸನ್ಮಾನಿಸಲಾಯಿತು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗ್‍ಭೂಷಣ ಶೇಟ್, ಮುಖ್ಯ ಶಿಕ್ಷಕಿ ನಿರ್ಮಲ, ಕುಸುಮ, ಎಸ್‍ಡಿಎಂಸಿ ಸದಸ್ಯರಾದ ಮಾರುತಿ ಪ್ರಭು, ರವಿರಾಜ್ ನಾಯಕ್, ಮಾಧವ ಆಚಾರ್ಯ, ಉಷಾ, ಸಂಗೀತಾ ರಾವ್, ನೂತನ ಶೇಟ್, ಪೂರ್ಣಿಮ, ಜಯಂತ್ ಹೊಳ್ಳ, ಅರುಣಾ ಹೊಳ್ಳ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು