ಉಡುಪಿ: ರಾಷ್ಟ್ರೀಯ ಹೆದ್ದಾರಿ 169ರ ಇಂದ್ರಾಳಿ ಮೇಲ್ಸೇತುವೆ ಹಾಗೂ ಕೆಳ ಪರ್ಕಳ ರಸ್ತೆ ಕಾಮಗಾರಿ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕ ಯಶ್ಪಾಲ್ ಸುವರ್ಣ ಅವರು ಅಧಿಕಾರಿಗಳೊಂದಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಅಂತಿಮ ಹಂತದ ಕೆಲಸಗಳು ನಡೆಯುತ್ತಿದೆ. ಇದೇ 22 ರಂದು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದರು.

ಮಳೆಯ ಕಾರಣದಿಂದ ಮುಂದೂಡಲ್ಪಟ್ಟಿದ್ದ ಕೆಳ ಪರ್ಕಳ ರಸ್ತೆ ದುರಸ್ತಿ ಕಾಮಗಾರಿ ಶೀಘ್ರ ಆರಂಭಗೊಳ್ಳಲಿದ್ದು, ಒಂದು ವಾರದ ಕಾಲ ಮಿತಿಯೊಳಗೆ ಕಾಮಗಾರಿ ಪೂರ್ಣ ಗೊಳಿಸಲು ರಾಷ್ಟೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಕೆಳ ಪರ್ಕಳ ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರ ದುಸ್ತರವಾದ ಕಾರಣ ರಾಷ್ಟ್ರೀಯ ಹೆದ್ದಾರಿ ಇಲಾಖೆ ವಿಶೇಷ ಅನುದಾನ ಒದಗಿಸಿದ್ದು ಅತ್ಯಂತ ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ಆರಂಭಗೊಳ್ಳಲಿದ್ದು, ಒಂದು ವಾರದ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ ನಾಯ್ಕ್, ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ಶ್ರೀ ಮಂಜುನಾಥ ನಾಯಕ್, ನಗರಸಭಾ ಸದಸ್ಯರಾದ ಸುಮಿತ್ರಾ ನಾಯಕ್, ಗಿರೀಶ್ ಅಂಚನ್, ಅಶೋಕ್ ನಾಯ್ಕ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.