ಶನಿವಾರ, ಮಾರ್ಚ್ 25, 2023
26 °C

ಇನ್ಫೋಸಿಸ್‌ನಿಂದ ವೈದ್ಯಕೀಯ ಉಪಕರಣ ನೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಇನ್ಫೋಸಿಸ್ ಸಂಸ್ಥೆಯಿಂದ ಜಿಲ್ಲಾಡಳಿತಕ್ಕೆ ₹ 70 ಲಕ್ಷ ಮೌಲ್ಯದ 10 ಆಮ್ಲಜನಕ ಸಾಂಧ್ರಕ, ಹಾಗೂ 10 ವೆಂಟಿಲೇಟರ್‌ಗಳನ್ನು ಗುರುವಾರ ಹಸ್ತಾಂತರಿಸಲಾಯಿತು. ಕಂಪನಿಯ ಪ್ರತಿನಿಧಿಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ವೈದ್ಯಕೀಯ ಉಪಕರಣಗಳನ್ನು ಹಸ್ತಾಂತರಿಸಿದರು.

ನಂತರ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಇನ್ಫೋಸಿಸ್‌ನಿಂದ ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲೂ ಜಿಲ್ಲಾಡಳಿತದ ಮನವಿಗೆ ಸ್ಪಂದನೆ ದೊರೆತಿತ್ತು. ಅಗತ್ಯವಿದ್ದ ವೈದ್ಯಕೀಯ ಸಾಮಗ್ರಿಗಳನ್ನು ಒದಗಿಸಲಾಗಿತ್ತು. ಕೋವಿಡ್ 2ನೇ ಅಲೆಯ ಸಮಯದಲ್ಲೂ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿರುವ ಇನ್ಫೋಸಿಸ್‌ ಆಮ್ಲಜನಕ ಸಾಂಧ್ರಕ, ಹಾಗೂ 10 ವೆಂಟಿಲೇಟರ್‌ಗಳನ್ನು ನೀಡಿದೆ. ಜಿಲ್ಲಾಡಳಿತದಿಂದ ಸಂಸ್ಥೆಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಉಡುಪಿ ಜಿಲ್ಲಾ ಆಸ್ಪತ್ರೆಗೆ 5 ವೆಂಟಿಲೇಟರ್, ಕುಂದಾಪುರ ತಾಲ್ಲೂಕು ಆಸ್ಪತ್ರೆಗೆ 2 ವೆಂಟಿಲೇಟರ್ ಹಾಗೂ ಕಾರ್ಕಳ ತಾಲ್ಲೂಕು ಆಸ್ಪತ್ರೆಗೆ 3 ವೆಂಟಿಲೇಟರ್‌ಗಳನ್ನು ನೀಡಲಾಗುವುದು. ಮೂರು ಆಸ್ಪತ್ರೆಗಳಿಗೆ ಆಮ್ಲಜನಕ ಸಾಂಧ್ರಕಗಳನ್ನು ವಿತರಿಸಲಾಗುವುದು ಎಂದರು.

ಈ ಸಂದರ್ಭ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಇನ್ಫೋಸಿಸ್ ಮಂಗಳೂರು ವಿಭಾಗದ ಮ್ಯಾನೇಜರ್‌ ವಾಸುದೇವ ಕಾಮತ್ ಮತ್ತು ಸಂದೀಪ್ ಡಿಸಿಲ್ವಾ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು