ಕುಂದಾಪುರ: ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎನ್.ನಂಜಪ್ಪ (59) ಬುಧವಾರ ರಾತ್ರಿ ಉಡುಪಿಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶಿವಮೊಗ್ಗ, ಹಾವೇರಿ, ದಾವಣಗೆರೆ ಉಡುಪಿ ಮುಂತಾದೆಡೆ ಕಾರ್ಯನಿರ್ವಹಿಸಿದ್ದರು. ಗಂಗೊಳ್ಳಿಯ ಕರಾವಳಿ ಪಡೆಯ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ ಅವರು, 2024ರ ಆಗಸ್ಟ್ನಿಂದ ಕುಂದಾಪುರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಗುರುವಾರ ಬೆಳಿಗ್ಗೆ ಇಲ್ಲಿನ ಪೊಲೀಸ್ ಠಾಣೆಯ ಆವರಣದಲ್ಲಿ ನಂಜಪ್ಪ ಅವರ ಪಾರ್ಥಿವ ಶರೀರಕ್ಕೆ ಪೊಲೀಸ್ ಇಲಾಖೆ, ತಾಲ್ಲೂಕು ಆಡಳಿತದಿಂದ ಗೌರವ ನಮನ ಸಲ್ಲಿಸಲಾಯಿತು. ಗೌರವ ಸಲ್ಲಿಕೆಯ ಬಳಿಕ ಪಾರ್ಥಿವ ಶರೀರವನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿಗೆ ಕೊಂಡೊಯ್ಯಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.