ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ: ಪ್ರಜಾಪ್ರಭುತ್ವಕ್ಕಾಗಿ ಕೈಜೋಡಿಸಿದ ಲಕ್ಷ ಮಂದಿ

Published : 15 ಸೆಪ್ಟೆಂಬರ್ 2024, 5:50 IST
Last Updated : 15 ಸೆಪ್ಟೆಂಬರ್ 2024, 5:50 IST
ಫಾಲೋ ಮಾಡಿ
Comments

ಉಡುಪಿ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾನುವಾರ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡರು.

ಬೈಂದೂರಿನ ಶಿರೂರು ಗೇಟ್ ನಿಂದ ಕಾಪು ತಾಲ್ಲೂಕಿನ ಹೆಜಮಾಡಿ ಸೇತುವೆವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು, ವಿವಿಧ ಇಲಾಖೆ ಗಳ ಅಧಿಕಾರಿ ಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಕೈ ಕೈ ಹಿಡಿದು ಮಾನವ ಸರಪಳಿ ರಚಿಸಿದರು.

ಜಿಲ್ಲಾ ಮಟ್ಟದ ಕಾರ್ಯಕ್ರಮ ಉಡುಪಿಯ ಕಿನ್ನಿಮೂಲ್ಕಿ ಸ್ವಾಗತ ಗೋಪುರ ದ ಬಳಿ ಜರುಗಿತು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್, ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT