ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ: ಯೋಗೇಶ್ವರ ಕೃಷ್ಣನೆಡೆಗೆ ಯೋಗ ನಡಿಗೆ

Published 21 ಜೂನ್ 2024, 5:02 IST
Last Updated 21 ಜೂನ್ 2024, 5:02 IST
ಅಕ್ಷರ ಗಾತ್ರ

ಉಡುಪಿ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಪರೀಕದ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ‘ಸೌಖ್ಯವನ’ ಹಾಗೂ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ನಗರದ ಸರ್ವೀಸ್‌ ಬಸ್ ನಿಲ್ದಾಣದಿಂದ ಶ್ರೀಕೃಷ್ಣ ಮಠದ ವರೆಗೆ ಶುಕ್ರವಾರ ‘ಯೋಗೇಶ್ವರ ಕೃಷ್ಣನೆಡೆಗೆ ಯೋಗ ನಡಿಗೆ’ ಹಮ್ಮಿಕೊಳ್ಳಲಾಗಿತ್ತು.

ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ, ಸೌಖ್ಯವನದ ಮುಖ್ಯ ವೈದ್ಯಾಧಿಕಾರಿ ಡಾ. ಗೋಪಾಲ ಪೂಜಾರಿ ಪಾಲ್ಗೊಂಡಿದ್ದರು.

ಶ್ರೀಕೃಷ್ಣ ಮಠದ ಗೀತಾಮಂದಿರದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ, ‘ಯಾರು ಯೋಗವನ್ನು ಮಾಡುತ್ತಾರೋ ಅವರಿಗೆ ಆರೋಗ್ಯ ಸಂಪತ್ತು ಲಭಿಸುತ್ತದೆ’ ಎಂದು ಹೇಳಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ಆದರ್ಶ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಜಿ.ಎಸ್‌. ಚಂದ್ರಶೇಖರ್‌ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT