ಶನಿವಾರ, ಡಿಸೆಂಬರ್ 3, 2022
21 °C

ದಂತ ವೈದ್ಯರ ಸಾವಿನ ಪ್ರಕರಣದ ತನಿಖೆ ತೀವ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಂದಾಪುರ: ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ನಾಪತ್ತೆಯಾಗಿ ತಾಲ್ಲೂಕಿನ ಹಟ್ಟಿಯಂಗಡಿ ಗ್ರಾಮ ಪಂಚಾಯಿತಿಯ ಕಾಡು ಅಜ್ಜಿಮನೆ ಎಂಬಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ದಂತವೈದ್ಯ ಕೃಷ್ಣಮೂರ್ತಿ ಸರ್ಪಂಗಳ ಅವರ ಸಾವಿನ ಪ್ರಕರಣದ‌ ತನಿಖೆ ತೀವ್ರಗೊಳಿಸಲಾಗಿದೆ.

ಮೃತದೇಹ ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ಎಸ್‌ಪಿ ಅವರ ಸೂಚನೆ ಮೇರೆಗೆ ಡಿವೈಎಸ್ಪಿ ಶ್ರೀಕಾಂತ್  ಮಾರ್ಗದರ್ಶನದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಗೋಪಿಕೃಷ್ಣ ನೇತೃತ್ವದ ತಂಡ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ.

ಪೊಲೀಸರ ತಂಡ ವೈದ್ಯರು ನಾಪತ್ತೆಯಾದ ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ. ಬದಿಯಡ್ಕದಿಂದ ಮೃತ ಶರೀರ ಪತ್ತೆಯಾದ ಸ್ಥಳದವರೆಗಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ವಿಧಿ ವಿಜ್ಞಾನ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ.

ನವೆಂಬರ್ 9ರಂದು ಮಂಗಳವಾರ ಕೊಂಕಣ ರೈಲ್ವೆ ಹಳಿಯ 50 ಮೀಟರ್ ಅಂತರದಲ್ಲಿ ಎರಡು ಭಾಗವಾದ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹ ನೋಡಿದ ಹೆಚ್ಚಿನವರು ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಶಂಕೆ ವ್ಯಕ್ತಪಡಿಸಿದ್ದರು.

ವೈದ್ಯರು ನಾಪತ್ತೆಯಾದ ದಿನದ ನಂತರ ಹಾಗೂ ಹಿಂದಿನ ದಿನಗಳ ಬೆಳವಣಿಗೆ ಕೇರಳ ಹಾಗೂ ಕರ್ನಾಟಕದಲ್ಲಿ ದೊಡ್ಡ ಸುದ್ದಿಯಾದ ಹಿನ್ನೆಲೆಯಲ್ಲಿ ಪೊಲೀಸರು ವಿಸ್ತೃತ ತನಿಖೆಗೆ ಮುಂದಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.