ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಂದ ನೇರವಾಗಿ ಗ್ರಾಹಕರ ಕೈಗೆ ಹಲಸು: ಸುಮಿತ್ರಾ ಎಸ್. ನಾಯಕ್

ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದಲ್ಲಿ 2 ದಿನಗಳ ಹಲಸು ಮೇಳ
Last Updated 17 ಜೂನ್ 2022, 16:00 IST
ಅಕ್ಷರ ಗಾತ್ರ

ಉಡುಪಿ: ಹಲಸು ಬೆಳೆಗಾರರು ಬೆಳೆದ ಉತ್ಪನ್ನಗಳನ್ನು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಿ ಹೆಚ್ಚು ಲಾಭ ಪಡೆಯಲು ಹಲಸು ಮೇಳಗಳು ಪ್ರಯೋಜನಕಾರಿ ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರಾ ಎಸ್. ನಾಯಕ್ ಹೇಳಿದರು

ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದಲ್ಲಿ ನಡೆದ ಹಲಸು ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಬೆಳೆದ ಹಲಸು ಸಗಟು ಮಾರಾಟದ ಮೂಲಕ ಬೆಳೆಗಾರರಿಗೆ ಅತ್ಯಂತ ಕಡಿಮೆ ಲಾಭ ಸಿಗುತ್ತಿತ್ತು.

ಹಲಸು, ಮಾವು ಸೇರಿದಂತೆ ಇತರ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನ ಮೇಳದಲ್ಲಿದ್ದು ಸಾರ್ವಜನಿಕರು ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಯಾವ ಯಾವ ಹಲಸು: ಹಲಸು ಮೇಳದಲ್ಲಿ ತೂಬುಗೆರೆಯ ಹಲಸು, ಚೇಳೂರು ಭಾಗದ ಚಂದ್ರ ಹಲಸು, ಕೆಂಪು ರುದ್ರಾಕ್ಷಿ ಹಲಸು, ಹಳದಿ ಹಲಸು, ಏಕಾದಶಿ ಹಲಸು, ಶಿವರಾತ್ರಿ ಹಲಸು ಹಾಗೂ ಹಲಸಿನ ಹಣ್ಣಿನ ಪದಾರ್ಥಗಳಾದ ಹಪ್ಪಳ, ಹೋಳಿಗೆ, ಹಲಸಿನ ಕಡಬು, ಹಲಸಿನ ಕಾಯಿ ಕಬಾಬ್, ಹಲಸಿನ ಬೀಜದ ಬಿಸ್ಕೆಟ್‌ಗಳನ್ನು ಸವಿಯಲು ಅವಕಾಶ ಇತ್ತು.

ಕಲ್ಪರಸ ಹಾಗೂ ಅದರ ಉತ್ಪನ್ನಗಳು, ಜಿಲ್ಲೆಯ ಅಪರೂಪದ ಬೆಳೆಗಳಲ್ಲಿ ಒಂದಾಗಿರುವ ರಂಬೂಟಾನ್ ಹಣ್ಣು, ಜೊತೆಗೆ ಶುದ್ಧ ಜೇನುತುಪ್ಪ ಕೂಡ ಮಾರಾಟಕ್ಕೆ ಲಭ್ಯವಿತ್ತು.

ಜಿಲ್ಲಾ ಪಂಚಾಯಿತಿ ಸಿಇಒ ಎಚ್‌.ಪ್ರಸನ್ನ ಮಾತನಾಡಿ, ಸರ್ಕಾರ ಹಲಸು ಬೆಳೆಗೆ ಪ್ರೋತ್ಸಾಹ ನೀಡಲು ಹಲವು ಯೋಜನೆಗಳನ್ನು ರೂಪಿಸಲು ಚಿಂತಿಸಿದ್ದು, ಅದರ ಭಾಗವಾಗಿ ಹಲಸು ಮೇಳಗಳು ನಡೆಯುತ್ತಿವೆ. ಸಾರ್ವಜನಿಕರು ಇಷ್ಟದ ಹಲಸುಗಳನ್ನು ಮೇಳಗಳಲ್ಲಿ ಕಡಿಮೆ ದರದಲ್ಲಿ ಖರೀದಿಸಬಹುದು ಎಂದರು.‌

ಕಾರ್ಯಕ್ರಮದಲ್ಲಿ ತೋಟಗಾರಿಕಾ ಇಲಾಖೆ ಉಪನಿರ್ದೇಶಕಿ ಭುವನೇಶ್ವರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT