ಉಡುಪಿ: ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಒಗದಿಸಲು ₹ 415 ಕೋಟಿ ವೆಚ್ಚದ ಕ್ರಿಯಾ ಯೋಜನೆಯ ಪ್ರಸ್ತಾವವನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲು ನಿರ್ಧರಿಸಲಾಗಿದೆ.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ಪಡೆಯಲಾಯಿತು.

ಜಲ ಜೀವನ್ ಮಿಷನ್ ಯೋಜನೆಯಡಿ 2024ರೊಳಗೆ ಗ್ರಾಮೀಣ ಪ್ರದೇಶದ ಪ್ರತಿ ವ್ಯಕ್ತಿಗೂ ವರ್ಷ ಪೂರ್ತಿ ದಿನಕ್ಕೆ 55 ಲೀಟರ್ ಶುದ್ದ ಕುಡಿಯುವ ನೀರು ಒದಗಿಸುವ ಗುರಿ ಇದ್ದು, ಜಿಲ್ಲೆಯಲ್ಲಿ ಈ ಯೋಜನೆ ಜಾರಿಗೆ ₹415 ಕೋಟಿ ಅಂದಾಜು ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಅಧ್ಯಕ್ಷ ದಿನಕರ ಬಾಬು ತಿಳಿಸಿದರು.

ಪ್ರಸ್ತಾವವನ್ನು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಸಲಿಸಲಿದ್ದು, ಶೀಘ್ರ ಅನುಮೋದನೆ ದೊರೆಯುವ ನಿರೀಕ್ಷೆ ಇದೆ. ಜಿಲ್ಲೆಯ ಪರಿಶಿಷ್ಟ ಜಾತಿ, ಪಂಗಡ ಸೇರಿದಂತೆ ಗ್ರಾಮೀಣ ಪ್ರದೇಶದ ಯಾವ ಮನೆಗಳು ಸೌಲಭ್ಯದಿಂದ ವಂಚಿತರಾಗದಂತೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದರು.

ಉಡುಪಿ ತಾಲ್ಲೂಕಿನ 101 ಗ್ರಾಮಗಳ 1,00,800 ಮನೆಗಳಿಗೆ ₹ 108.86 ಕೋಟಿ, ಕುಂದಾಪುರ ತಾಲ್ಲೂಕಿನ 50 ಗ್ರಾಮಗಳ 58,161 ಮನೆಗಳಿಗೆ ₹ 109.44 ಕೋಟಿ ಹಾಗೂ ಕಾರ್ಕಳ ತಾಲ್ಲೂಕಿನ 99 ಗ್ರಾಮಗಳ 88,000 ಮನೆಗಳಿಗೆ ₹ 196.76 ಕೋಟಿ ವೆಚ್ಚದ ಕ್ರಿಯಾ ಯೋಜನೆ ರೂಪಿಸಲಾಗಿದೆ.

ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ, ಶಾಲೆ, ಅಸ್ಪತ್ರೆಗಳಿಗೂ ಸಹ ನೀರಿನ ಸೌಲಭ್ಯ ಒದಗಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಪ್ರೀತಿ ಗೆಹ್ಲೋಟ್ ತಿಳಿಸಿದರು.

ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಂಜಿನಿಯರ್ ರಾಜ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.