‘ಜಲಜೀವನ್ ಮಿಷನ್ ಯಶಸ್ವಿಗೆ ಕ್ರಮಕೈಗೊಳ್ಳಿ’

ಉಡುಪಿ: ಜಲಜೀವನ್ ಮಿಷನ್ ಯೋಜನೆಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನ ಮಾಡುವ ಮೂಲಕ ಮುಂದೆ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ತಿಳಿಸಿದರು.
ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಪುಣ್ಯಕೋಟಿ ಇಂಟಗ್ರೇಟೆಡ್ ರೂರಲ್ ಡೆವಲಪ್ಮೆಂಟ್ ಸೊಸೈಟಿ ಸಹಯೋಗದಲ್ಲಿ ಎಂಜಿನಿಯರ್ಗಳು, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ನಡೆದ ಜಲಜೀವನ್ ಮಿಷನ್ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ ಮಳೆನೀರಿನ ಸಂಗ್ರಹ ಮಾದರಿ ಅನಾವರಣಗೊಳಿಸಿ ಮಾತನಾಡಿ, ನೀರು ಅತ್ಯಂತ ಅಮೂಲ್ಯವಾದದ್ದು, ವ್ಯರ್ಥಮಾಡದೆ ಮಿತವಾಗಿ ಬಳಸುವ ಕುರಿತು ಗ್ರಾಮೀಣ ಜನರಲ್ಲಿ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಎ.ರಾಜಾ, ಬೆಂಗಳೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ರಾಜ್ಯ ಸಮಾಲೋಚಕ ದಿನೇಶ್, ಪುಣ್ಯಕೋಟಿ ಸಂಸ್ಥೆಯ ಕಾರ್ಯದರ್ಶಿ ಲಕ್ಷ್ಮೀ ನರಸಿಂಹಯ್ಯ, ಮಳೆ ನೀರು ಸಂಗ್ರಹ ತಜ್ಞ ಜೊಸೆಫ್ ರೊಬೆಲ್ಲೊ ಇದ್ದರು.
ಗಿರೀಶ್ ಸ್ವಾಗತಿಸಿದರು, ಸಹನಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಸುಧೀರ್ ವಂದಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.