ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಜನೆ ಅನುಷ್ಠಾನಕ್ಕೆ ಆದ್ಯತೆ: ಸಿಇಒ

ಜಲಜೀವನ್ ಮಿಷನ್: ಕಾಡೂರು ಗ್ರಾ.ಪಂ.ಗೆ ಭೇಟಿ
Last Updated 27 ಜುಲೈ 2021, 16:23 IST
ಅಕ್ಷರ ಗಾತ್ರ

ಕಾಡೂರು(ಬ್ರಹ್ಮಾವರ): ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನಪ್ರತಿನಿಧಿಗಳು ಹೆಚ್ಚಿನ ಕಾಳಜಿವಹಿಸಿ ಸಹಕಾರ ನೀಡಿದಲ್ಲಿ ಜಲಜೀವನ್ ಮಿಷನ್ ಯೋಜನೆಯ ಯಶಸ್ವಿ ಅನುಷ್ಠಾನ ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಟ್ ಹೇಳಿದರು.

ತಾಲ್ಲೂಕಿನ ಕಾಡೂರು ಗ್ರಾಮ ಪಂಚಾಯಿತಿಗೆ ಮಂಗಳವಾರ ಭೇಟಿ ನೀಡಿ, ಅವರು ಮಾತನಾಡಿದರು. ಜಲಜೀವನ್ ಮಿಷನ್‌ನಡಿ 15ನೇ ಹಣಕಾಸು ಅನುದಾನದ ಪಾಲನ್ನು ಮೀಸಲಿರಿಸುವ ಜತೆಗೆ ನಾಗರಿಕರು ತಮ್ಮ ಪಾಲಿನ ವಂತಿಗೆಯನ್ನು ನೀಡಬೇಕು. ನಾಗರಿಕರಿಗೆ ಈ ಕುರಿತು ಮನವರಿಕೆ ಮಾಡುವುದು ಮಹತ್ವದ್ದಾಗಿದೆ ಎಂದರು.

ಜಲಜೀವನ್ ಮಿಷನ್ ಉತ್ತಮ ಯೋಜನೆಯಾಗಿದ್ದು, ಪ್ರತಿಯೊಬ್ಬ ನಾಗರಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶ ಹೊಂದಿದೆ ಎಂದರು.

ಕಾಡೂರು ಪಂಚಾಯಿತಿ ಅಧ್ಯಕ್ಷ ಪಾಂಡುರಂಗ ಶೆಟ್ಟಿ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ ಎಲ್ಲ ಮನೆಗಳಿಗೂ ಜನಪ್ರತಿನಿಧಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಮೂಲಕ ಯೋಜನೆಯ ಯಶಸ್ಸಿಗೆ ಸಹಕಾರ ನೀಡುವುದಾಗಿ ತಿಳಿಸಿದರು.

ಪಂಚಾಯಿತಿ ಉಪಾಧ್ಯಕ್ಷೆ ಅಮಿತಾ, ಸದಸ್ಯರಾದ ಗಿರೀಶ್ ರಾವ್, ರಘುರಾಮ ಶೆಟ್ಟಿ, ಜಲಂಧರ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಇಬ್ರಾಹಿಂಪುರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್ ಕೆ ಹಾಗೂ ಪಂಚಾಯಿತಿ ಸಿಬ್ಬಂದಿ, ಎಸ್.ಎಲ್.ಆರ್.ಎಂ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT