ಮಂಗಳವಾರ, ಸೆಪ್ಟೆಂಬರ್ 21, 2021
29 °C
ಕುಯಿಲಾಡಿ ಸುರೇಶ್ ನಾಯಕ್‌

ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಜನಾಶೀರ್ವಾದ ಯಾತ್ರೆ ಸಮಾವೇಶ 19ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಆ.19ರಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಜನಾಶೀರ್ವಾದ ಯಾತ್ರೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಶಯದಂತೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಪ್ರಚಲಿತಗೊಳಿಸುವ ನಿಟ್ಟಿನಲ್ಲಿ ‘ಜನಾಶೀರ್ವಾದ ಯಾತ್ರೆ’ಯನ್ನು ಆ.16ರಿಂದ ಆರಂಭಿಸಲಾಗಿದ್ದು, 19ರಂದು ಕೇಂದ್ರ ಸಚಿವೆ ಶೋಭಾ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದರು.

ಕರ್ನಾಟಕದಲ್ಲಿ ನಾಲ್ಕು ಕೇಂದ್ರ ಸಚಿವರ ನೇತೃತ್ವದಲ್ಲಿ ಜನಾಶೀರ್ವಾದ ಯಾತ್ರೆ ನಡೆಯುತ್ತಿದೆ. ಉಡುಪಿ ಜಿಲ್ಲೆಗೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಆ.18ರಂದು ಸಂಜೆ ಹೆಬ್ರಿಗೆ ಯಾತ್ರೆ ಬರಲಿದೆ. ಈ ಸಂದರ್ಭ ಜಿಲ್ಲಾ ಬಿಜೆಪಿಯಿಂದ ಸಚಿವರಿಗೆ ಹಾಗೂ ಜನಾಶೀರ್ವಾದ ಯಾತ್ರೆಗೆ ಸ್ವಾಗತ ಕೋರಲಾಗುವುದು ಎಂದರು.

19ರಂದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಬೆಳಿಗ್ಗೆ 11ಕ್ಕೆ ನಗರದ ಪುರಭವನದಲ್ಲಿ ಜನಾಶೀರ್ವಾದ ಯಾತ್ರೆಯ ಸಮಾವೇಶ ನಡೆಯಲಿದೆ. ಸಚಿವರಿಗೆ ಅಭಿನಂದನಾ ಸಮಾರಂಭ ಕೂಡ ಆಯೋಜಿಸಲಾಗಿದೆ. ಸಚಿವರು, ಶಾಸಕರು, ಮುಖಂಡರು ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ಹೇಳಿದರು.

ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಇದ್ದರು.

ವಿವರ: 18ರಂದು ರಾತ್ರಿ 7.15ಕ್ಕೆ ಜನಾಶೀರ್ವಾದ ಯಾತ್ರೆಗೆ ಹೆಬ್ರಿಯಲ್ಲಿ ಸ್ವಾಗತ, 8.30ಕ್ಕೆ ಹಿರಿಯಡ್ಕ, 9.30ಕ್ಕೆ ಜಿಲ್ಲಾ ಬಿಜೆಪಿ ಕಚೇರಿಗೆ ಬೇಟಿ, 19ರಂದು ಬೆಳಿಗ್ಗೆ 8ಕ್ಕೆ ಉಡುಪಿ ಶ್ರೀಕೃಷ್ಣ ಮಠ ಭೇಟಿ, ಸ್ವಾಮೀಜಿ ಜತೆ ಮಾತುಕತೆ, 10ಕ್ಕೆ ಪತ್ರಿಕಾ ಗೋಷ್ಠಿ, 10.30ಕ್ಕೆ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದಲ್ಲಿ ಪುಷ್ಪಾರ್ಚನೆ, 11ಕ್ಕೆ ಲಸಿಕಾ ಕೇಂದ್ರಕ್ಕೆ ಬೇಟಿ, 11.30ಕ್ಕೆ ಪುರಭವನದಲ್ಲಿ 'ಜನಾಶೀರ್ವಾದ ಯಾತ್ರೆ ಸಮಾವೇಶ' ಅಭಿನಂದನಾ ಸಮಾರಂಭ, ಮಧ್ಯಾಹ್ನ 1ಕ್ಕೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಆಯ್ದ ಫಲಾನುಭವಿಗಳೊಂದಿಗೆ ಸಂವಾದ, 2ಕ್ಕೆ ಬ್ರಹ್ಮಾವರದ ಪಡಿತರ ವಿತರಣಾ ಕೇಂದ್ರಕ್ಕೆ ಭೇಟಿ, 3ಕ್ಕೆ ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜಕ ಘಟಕ ಉದ್ಘಾಟನೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು