ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯವಂತ ಸಮಾಜ ನಿರ್ಮಾಣ ಗುರಿ

ಜಂತುಹುಳು ನಿವಾರಣಾ ದಿನದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ.ಕೆ.ಶೆಟ್ಟಿ
Last Updated 10 ಫೆಬ್ರುವರಿ 2020, 12:34 IST
ಅಕ್ಷರ ಗಾತ್ರ

ಉಡುಪಿ: ಮಕ್ಕಳು ಭಾರತದ ಭವಿಷ್ಯ. ಬಲಿಷ್ಠ ಹಾಗೂ ಸದೃಢ ದೇಶ ನಿರ್ಮಾಣವಾಗಬೇಕಾದರೆ ಮುಂದಿನ ಪೀಳಿಗೆ ಆರೋಗ್ಯವಂತರಾಗಿರುವಂತೆ ಸರ್ಕಾರ ಯೋಜನೆಗಳನ್ನು ರೂಪಿಸಬೇಕು ಎಂದುಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ.ಕೆ.ಶೆಟ್ಟಿ ಹೇಳಿದರು.

ಸೋಮವಾರ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ, ರೋಟರಿ ಕ್ಲಬ್ ಸಹಯೋಗದಲ್ಲಿ ಕಾಡಬೆಟ್ಟು ಟಿ.ಎ.ಪೈ ಮಾಡರ್ನ್‌ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಪರಿಪೂರ್ಣ ಆರೋಗ್ಯಕ್ಕಾಗಿ ಸರ್ಕಾರ ಶಾಲೆಗಳಲ್ಲಿ ಜಂತುಹುಳ ನಿವಾರಣೆಯ ಮಾತ್ರೆಗಳನ್ನು ನೀಡುವ ಕಾರ್ಯಕ್ರಮ ಹಾಕಿಕೊಂಡಿದೆ.ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಜಾರಿಗೆ ತರುವ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು ಎಂದರು.

ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಇರುವ ಕಾರ್ಯಕ್ರಮಗಳಲ್ಲಿ ಜಂತುಹುಳು ನಿವಾರಣೆ ಮಾತ್ರೆ ವಿತರಣೆಯೂ ಒಂದು. ಜಂತು ಹುಳು ಬಾಧೆಯಿಂದಾಗಿ ಮಕ್ಕಳಲ್ಲಿ ಪಾಠ ಕಲಿಯಲು ನಿರಾಸಕ್ತಿ ಉಂಟಾಗುತ್ತದೆ. ಅಪೌಷ್ಟಿಕತೆ ಎದುರಾಗುತ್ತದೆ. ಇಂತಹ ಸಮಸ್ಯೆಗಳನ್ನು ನಿವಾರಿಸಲು ಈ ಯೋಜನೆ ಜಾರಿಗೊಳಿಸಲಾಗಿದೆ ಎಂದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಎಂ.ಜಿ.ರಾಮ್ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯ ಎಲ್ಲ ಅನುದಾನಿತ, ಸರ್ಕಾರಿ, ಖಾಸಗಿ ಶಾಲೆ, ಕಾಲೇಜುಗಳಲ್ಲಿ ಜಂತುಹುಳ ನಿವಾರಣಾ ಮಾತ್ರೆಗಳನ್ನು ನೀಡಲಾಗುತ್ತಿದ್ದು, 19 ವರ್ಷದವರೆಗಿನ 2,67,828 ಮಕ್ಕಳಿಗೆ ಮಾತ್ರೆ ನೀಡುವ ಗುರಿ ಇದೆ ಎಂದು ಮಾಹಿತಿ ನೀಡಿದರು.

ಪ್ರತಿವರ್ಷ ಫೆಬ್ರವರಿ ಮತ್ತು ಆಗಸ್ಟ್‌ನಲ್ಲಿ ಮಾತ್ರೆ ನೀಡಲಾಗುತ್ತಿದೆ. ಜಂತುಹುಳು ಬಾಧೆಯಿಂದಾಗಿ ಮಕ್ಕಳು ಶಾಲೆಗೆ ಗೈರು ಹಾಜರಾಗುವುದು ಹಾಗೂ ಕಲಿಕೆಯಲ್ಲಿ ಹಿಂದುಳಿಯು ಸಮಸ್ಯೆ ಎದುರಿಸುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಡಿಡಿಪಿಐ ಶೇಷಶಯನ ಕಾರಿಂಜ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ರಾಮರಾವ್, ಅಜ್ಜರಕಾಡು ನಗರಸಭಾ ಸದಸ್ಯೆ ರಶ್ಮಿ ಸಿ.ಭಟ್, ಕಾಪು ಪುರಸಭಾ ಸದಸ್ಯೆ ರಮಾ.ವೈ ಶೆಟ್ಟಿ, ಶಾಲಾ ಆಡಳಿತ ಮಂಡಳಿ ಟ್ರಸ್ಟಿಗಳಾದ ರಮೇಶ್ ಕಿಣಿ, ರಮೇಶ್ ರಾವ್, ಮುಖ್ಯೋಪಾಧ್ಯಾಯಿನಿ ಸುಲೋಚನ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾರಾಯಣ್ ಭಂಡಾರಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಪ್ರಶಾಂತ್ ಭಟ್ ಉಪಸ್ಥಿತರಿದ್ದರು.

ಹಿರಿಯ ಆರೋಗ್ಯ ಸಹಾಯಕ ಸತೀಶ್ ರಾವ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರೋಟರಿ ಕ್ಲಬ್ ಅಧ್ಯಕ್ಷ ಜನಾರ್ಧನ್ ಭಟ್ ವಂದಿಸಿದರು.ಕಾರ್ಯಕ್ರಮದ ಅಂಗವಾಗಿ ಜಾಥಾ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT