ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯದ ಅಮೃತ ಮಹೋತ್ಸವ: ಜಾಥಾ

Last Updated 14 ಆಗಸ್ಟ್ 2022, 13:07 IST
ಅಕ್ಷರ ಗಾತ್ರ

ಉಡುಪಿ: ಬನ್ನಂಜೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಹಾಗೂ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಯದ ವಿದ್ಯಾರ್ಥಿನಿಯರು ಭಾನುವಾರ ಬೆಳಿಗ್ಗೆ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಅಜ್ಜರಕಾಡು ಹುತಾತ್ಮರ ಸ್ಮಾರಕ ಭವನದವರೆಗೆಜಾಥಾನಡೆಸಿದರು.

ತ್ರಿವರ್ಣದ ಸೀರೆಯುಟ್ಟಿದ್ದು ವಿದ್ಯಾರ್ಥಿನಿಯರು ಭಾರತ ಮಾತೆಯರಂತೆ ಕಂಗೊಳಿಸಿದರು. ಡಾ.ಬಿ.ಆರ್.ಅಂಬೇಡ್ಕರ್, ಛತ್ರಪತಿ ಶಿವಾಜಿ, ಕಿತ್ತೂರು ಚೆನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮಿ ಬಾಯಿ ವೇಷದಲ್ಲಿ ಗಮನ ಸೆಳೆದರು. ಮೆರವಣಿಗೆಯುದ್ಧಕ್ಕೂ ತ್ರಿವರ್ಣ ಧ್ವಜ ಹಿಡಿದು ಸಾಗಿದ ವಿದ್ಯಾರ್ಥಿನಿಯರು ಸ್ವಾತಂತ್ರ್ಯ ಹೋರಾಟಗಾರರ ಘೋಷಣೆ ಕೂಗಿದರು. 200ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಸ್‌.ಶರ್ಮಿಳಾ ಜಾಥಾಗೆ ಚಾಲನೆ‌ ನೀಡಿದರು. ಪೌರಾಯುಕ್ತ ಡಾ. ಉದಯ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಅನಿತಾ ಮಡ್ಲೂರು, ಸಹಾಯಕ ನಿರ್ದೇಶಕ ರಮೇಶ್ ಭಾಗವಹಿಸಿದ್ದರು.

ನಿಲಯ ಮೇಲ್ವಿಚಾರಕಿ ಎಸ್‌.ಸುಚಿತ್ರಾ, ಐಟಿಡಿಪಿ ಸಿಬ್ಬಂದಿ ಶ್ರೀದೇವಿ, ನಿಲಯ ಸಿಬ್ಬಂದಿ ಸುಜಾತಾ, ಎಚ್‌.ಪಿ.ಸುಜಾತಾ, ಪದ್ದು, ಸುಲೋಚನಾ, ರಪಿತಾ, ಇಂದಿರಾ, ಶ್ರೀರಕ್ಷಾ, ಶಶಿಕಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT