ಗುರುವಾರ , ಫೆಬ್ರವರಿ 2, 2023
27 °C

ಓದುವ ಪ್ರವೃತ್ತಿ ಉತ್ತಮ ವ್ಯಕ್ತಿತ್ವಕ್ಕೆ ಸಹಕಾರಿ: ಜಯಪ್ರಕಾಶ್ ಹೆಗ್ಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಶಾಲಾ ಹಂತದಲ್ಲಿಯೇ ಓದುವ ಪ್ರವೃತ್ತಿ ಬೆಳೆಸಿಕೊಂಡರೆ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸಲಹೆ ನೀಡಿದರು.

ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನ ನಿರ್ಮಾಣ, ಅಭಿವೃದ್ಧಿ ಸಮಿತಿ ಚಾರಿಟೆಬಲ್ ಟ್ರಸ್ಟ್‌ನಿಂದ ಕುಂತಳ ನಗರದ ಬಂಟರ ಸಂಘದ ಕೌಶಲ ಅಭಿವೃದ್ಧಿ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಎರಡು ದಿನಗಳ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ಕಾಲಘಟ್ಟಕ್ಕೆ ತಕ್ಕಂತಹ ಸಂವಹನ ಕೌಶಲವನ್ನು ಯುವ ಜನಾಂಗ ಬೆಳೆಸಿಕೊಳ್ಳಬೇಕು. ಅಂಕಗಳಿಗಿಂತಲೂ ಸಂವಹನ ಕೌಶಲ ಬಹಳ ಮುಖ್ಯ. ಕೈಲಾಗುವುದಿಲ್ಲ ಎಂದು ಹಿಂದೆ ಸರಿಯುವ ಬದಲು ಅವಕಾಶಗಳು ಬಂದಾಗ ಬಾಚಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಉದ್ಯಮಿ ಕೆ.ಪ್ರಕಾಶ್ ಶೆಟ್ಟಿ ಮಾತನಾಡಿ, ಶಿಕ್ಷಣಕ್ಕಿಂತ ಸಾಮಾನ್ಯ ಜ್ಞಾನ, ತಿಳಿವಳಿಕೆ ಬಹಳ ಮುಖ್ಯ. ಸಂದರ್ಭಕ್ಕೆ ತಕ್ಕಂತೆ ಪ್ರತಿಭೆ ಪ್ರದರ್ಶಿಸುವ ಗುಣವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಯುವಕರಿಗೆ ಸಲಹೆ ನೀಡಿದರು.

ಹಿಂದೆ ಉದ್ಯೋಗಗಳನ್ನು ಹುಡುಕುವಂತಹ ಪರಿಸ್ಥಿತಿ ಇತ್ತು. ಸದ್ಯ ಉದ್ಯೋಗದಾತ ಸಂಸ್ಥೆಗಳು ಪ್ರತಿಭೆಗಳನ್ನು ಹುಡುಕಿ ಉದ್ಯೋಗ ನೀಡುತ್ತಿವೆ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕೆನರಾ ಬ್ಯಾಂಕ್ ಜನರಲ್ ಮ್ಯಾನೆಜರ್ ರಾಮಾ ನಾಯ್ಕ್, ಸ್ಟೀಲ್ ಸ್ಟ್ರಾಂಗ್ ಸಿಎಂಡಿ ರಮೇಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.‌

ಟ್ರಸ್ಟ್‌ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಪು ಶಾಸಕ ಲಾಲಾಜಿ ಮೆಂಡನ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬೆಲ್ ಒ ಸೀಲ್‌ ಕಂಪೆನಿಯ ಸಪ್ನಾ ಸಲಿನ್ಸ್, ನಿಟ್ಟೆಯ ಕೆ.ಎಸ್‌.ಹೆಗ್ಡೆ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನಿರ್ದೇಶಕ ಪ್ರೊ.ಕೆ.ಶಂಕರ್, ಕುಂತಳ ನಗರ  ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಸಕಾರಾಮ್ ಶೆಟ್ಟಿ, ಸಮಾಜದ ಮುಖಂಡರಾದ ಪ್ರೊ.ಸುಧೀರ್ ರಾಜ್, ಪ್ರದೀಪ್ ಶೆಟ್ಟಿ, ಗ್ಲೇನ್ ಡಿಸೋಜಾ, ವಿಜಿತ್ ಶೆಟ್ಟಿ, ಕಾರ್ತಿಕ್ ಶೆಟ್ಟಿ, ಹೇಮಂತ್ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ ಇದ್ದರು.

ಉದ್ಯೋಗ ಮೇಳದಲ್ಲಿ 1000ಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು