ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ | ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮ: ಜಯಪ್ರಕಾಶ್ ಹೆಗ್ಡೆ

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ನೇಮಕ
Last Updated 23 ನವೆಂಬರ್ 2020, 19:30 IST
ಅಕ್ಷರ ಗಾತ್ರ

ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ನೇಮಕವಾದ ಬೆನ್ನಲ್ಲೇ ‘ಪ್ರಜಾವಾಣಿ’ ಜತೆ ಮಾತನಾಡಿದ ಅವರು, ‘ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪೂರಕವಾಗಿ ಸೇವೆ ಸಲ್ಲಿಸಲು ರಾಜ್ಯ ಸರ್ಕಾರ ಉತ್ತಮ ಅವಕಾಶ ನೀಡಿದೆ. ಅಧಿಕಾರ ಸ್ವೀಕರಿಸಿದ ಬಳಿಕ ಆಯೋಗಕ್ಕೆ ಸಲ್ಲಿಕೆಯಾಗಿರುವ ವರದಿಗಳನ್ನು ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಆಯೋಗಕ್ಕೆ ನೇಮಕವಾಗಿರುವ ಹಿಂದಿನ ಅಧ್ಯಕ್ಷರ ಜತೆಯೂ ಚರ್ಚಿಸಿ ಸಲಹೆಗಳನ್ನು ಪಡೆಯುವುದಾಗಿ’ ಎಂದು ತಿಳಿಸಿದರು.

‘ವಕೀಲ ವೃತ್ತಿಯಲ್ಲಿ ಸಂಪಾದಿಸಿರುವ ಅನುಭವವನ್ನು ಆಯೋಗದ ಬೆಳವಣಿಗೆಗೆ ಬಳಸಿಕೊಳ್ಳುತ್ತೇನೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸಿಗಬೇಕಾದ ನ್ಯಾಯಯುತ ಸೌಲಭ್ಯಗಳನ್ನು ತಲುಪಿಸಲು ಶ್ರಮವಹಿಸುವುದಾಗಿ’ ಜಯಪ್ರಕಾಶ್ ಹೆಗ್ಡೆ ಅವರು ಭರವಸೆ ನೀಡಿದರು.

ಹಿರಿಯ ರಾಜಕಾರಣಿ:

ವಿಶಿಷ್ಟ ರಾಜಕಾರಣದ ಮೂಲಕ ಅಭಿಮಾನಿ ವರ್ಗವನ್ನು ಸೃಷ್ಟಿಸಿಕೊಂಡಿರುವ ಜಯಪ್ರಕಾಶ್ ಹೆಗ್ಡೆ ಅವರು ಮೂರು ಬಾರಿ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜನತಾದಳದಿಂದ ಶಾಸಕರಾಗಿ ಗೆದ್ದ ಮೊದಲ ಅವಧಿಯಲ್ಲೇ ಮೀನುಗಾರಿಕಾ ಹಾಗೂ ಬಂದರು ಖಾತೆ ಸಚಿವರಾಗಿದ್ದರು. 2012ರಲ್ಲಿ ನಡೆದ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ನಂತರ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ಆಕಾಂಕ್ಷಿತರ ಪಟ್ಟಿಯಲ್ಲಿ ಜಯಪ್ರಕಾಶ್ ಹೆಗ್ಡೆ ಅವರ ಹೆಸರು ಮುಂಚೂಣಿಯಲ್ಲಿತ್ತು. ಕೊನೆ ಘಳಿಗೆಯಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್‌ ಸಿಕ್ಕಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT