ಮಂಗಳವಾರ, 28 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಕೆಸರು ಗದ್ದೆಗಿಳಿದು ನಾಟಿ ಮಾಡಿದ ಸಚಿವ ಮಾಧುಸ್ವಾಮಿ

ಎತ್ತಿನಹೊಳೆ ಯೋಜನೆ ಪೂರ್ಣವಾಗಲು 2 ವರ್ಷ ಬೇಕು: ಮಾಧುಸ್ವಾಮಿ
Last Updated 4 ಜುಲೈ 2021, 7:06 IST
ಅಕ್ಷರ ಗಾತ್ರ

ಉಡುಪಿ: ಬಯಲುಸೀಮೆಗೆ ನೀರುಣಿಸುವ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳಲು ಇನ್ನೂ ಎರಡು ವರ್ಷ ಬೇಕಾಗಬಹುದು ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ಭಾನುವಾರ ಕಕ್ಕುಂಜೆಯಲ್ಲಿ ‘ಹಡಿಲುಭೂಮಿ ಕೃಷಿ ಆಂದೋಲನ’ಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಚಿಕ್ಕಬಳ್ಳಾಪುರ ಹಾಗೂ ತುಮಕೂರು ನಡುವಿನ ಭೈರಗೊಂಡ್ಲ ಹಳ್ಳಿಯ ಬಳಿ ಅಣೆಕಟ್ಟು ನಿರ್ಮಾಣಕ್ಕೆ 5,500 ಎಕರೆ ಭೂಮಿ ಅಗತ್ಯವಿದ್ದು, ಭೂಸ್ವಾಧೀನ ಪ್ರಕ್ರಿಯೆಗೆ ತೊಡಕಾಗಿದೆ ಎಂದರು.

ತುಮಕೂರು ಜಿಲ್ಲೆಯಲ್ಲಿ ಭೂಮಿಯ ಮಾರುಕಟ್ಟೆ ಮೌಲ್ಯ ಬಹಳ ಕಡಿಮೆ ಇದ್ದರೆ, ದೊಡ್ಡಬಳ್ಳಾಪುರದಲ್ಲಿ ಹೆಚ್ಚಾಗಿದೆ. ಈ ಕಾರಣಕ್ಕೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ರೈತರು ಎತ್ತಿನಹೊಳೆ ಯೋಜನೆಗೆ ಭೂಮಿ ಬಿಟ್ಟುಕೊಡಲು ಒಪ್ಪುತ್ತಿಲ್ಲ ಎಂದರು.

ರೈತರಿಗೆ ಭೂ ಪರಿಹಾರ ನೀಡಲು ಸಮಸ್ಯೆ ಇಲ್ಲ. ಭೂಮಿಯ ಮಾರುಕಟ್ಟೆ ಮೌಲ್ಯದ ನಾಲ್ಕು ಪಟ್ಟು ಮಾತ್ರ ಪರಿಹಾರ ನೀಡಲು ಕಾನೂನಿನಲ್ಲಿ ಅವಕಾಶವಿದ್ದು, ಹೆಚ್ಚಿನ ಪರಿಹಾರ ನೀಡಲು ಸಾಧ್ಯವಿಲ್ಲ. ಹಾಗಾಗಿ, ಭೂಮಿ ಪರಿಹಾರ ನೀಡಲು ಪರ್ಯಾಯ ಯೋಜನೆ ಮಾಡಲಾಗುತ್ತಿದೆ. ಎತ್ತಿನಹೊಳೆ ಯೋಜನೆ ವ್ಯಾಪ್ತಿಯ ಮೂರು ಜಿಲ್ಲೆಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, 2 ವರ್ಷಗಳಲ್ಲಿ ನೀರು ಹರಿಯಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

[object Object]

ನಾಟಿ ಮಾಡಿದ ಮಾಧುಸ್ವಾಮಿ:

ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಕಕ್ಕುಂಜೆಯಲ್ಲಿ ಕೆಸರು ಗದ್ದೆಗಿಳಿದು ನಾಟಿ ಮಾಡಿದರು. ಸಚಿವರಿಗೆ ಶಾಸಕ ರಘುಪತಿ ಭಟ್‌ ಹಾಗೂ ಸ್ಥಳೀಯ ಮುಖಂಡರು ಸಾಥ್ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT