ಗುರುವಾರ , ಜೂಲೈ 9, 2020
23 °C

ಉಡುಪಿ: ಜಿಲ್ಲಾ ಪಂಚಾಯಿತಿ ಅಧ್ಯಕ್ಷರೀಗ ಬಸ್‌ ಕಂಡಕ್ಟರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಈಚೆಗೆ ಖಾಸಗಿ ಬಸ್‌ನಲ್ಲಿ ನಿರ್ವಾಹಕರಾಗಿ ಗಮನ ಸೆಳೆದರು.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಜನರ ಅನುಕೂಲಕ್ಕಾಗಿ ಕಡಿಯಾಳಿ ಗಣೇಶೋತ್ಸವ ಸಮಿತಿ ಹಾಗೂ ಖಾಸಗಿ ಬಸ್‌ ಮಾಲೀಕರು ಒಂದು ವಾರಗಳ ಕಾಲ ನಗರದಲ್ಲಿ ಉಚಿತವಾಗಿ ಬಸ್‌ಗಳನ್ನು ಓಡಿಸುತ್ತಿದ್ದು, ಬಸ್‌ಗಳಲ್ಲಿ ಬಿಜೆಪಿ ಹಾಗೂ ಸಾಮಾಜಿಕ ಕಾರ್ಯಕರ್ತರು ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಕೂಡ ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸಿದರು. ದಿನಕರ ಬಾಬು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗುವ ಮುನ್ನ ಚಾಲಕ ವೃತ್ತಿಯಲ್ಲಿದ್ದವರು. 

ರಾಜಕೀಯ ಒತ್ತಡದ ಮಧ್ಯೆ ನಡುವೆ ಬಸ್‌ನಲ್ಲಿ ನಿರ್ವಾಹಕ ವೃತ್ತಿ ಮಾಡಿದ್ದು ಖುಷಿ ಕೊಟ್ಟಿತು. ಇಡೀ ದಿನ ಕಂಡಕ್ಟರ್ ಆಗಿದ್ದು ಭಿನ್ನವಾದ ಅನುಭವ ನೀಡಿತು ಎಂದು ದಿನಕರ ಬಾಬು ಪ್ರತಿಕ್ರಿಯೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು