ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆಂಡರ್‌ಗೆ ಹೈಕೋರ್ಟ್‌ ಅಸ್ತು

Last Updated 27 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 198 ವಾರ್ಡುಗಳಲ್ಲಿರುವ 4.85 ಲಕ್ಷ ಸಾಂಪ್ರದಾಯಿಕ ಬೀದಿ ದೀಪಗಳನ್ನು ಎಲ್‌ಇಡಿ ಬಲ್ಬ್‌ಗಳಿಗೆ ಬದಲಾಯಿಸುವ ಪ್ರಕ್ರಿಯೆಗೆ ಹೈಕೋರ್ಟ್‌ ಹಸಿರು ನಿಶಾನೆ ತೋರಿಸಿದೆ.

ಈ ಕುರಿತ ಟೆಂಡರ್‌ ಪ್ರಶ್ನಿಸಿ ‘ಬಿಬಿಎಂಪಿ ವಿದ್ಯುತ್‌ ಗುತ್ತಿಗೆದಾರರ ಸಂಘ‘ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎ.ಎಸ್‌.ಬೋಪಣ್ಣ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಜಾ ಮಾಡಿದೆ.

‘ಪಾಲಿಕೆ ಕರೆದಿರುವ ಟೆಂಡರ್‌ನಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಹಾಗೂ ಇದರಿಂದ ವಿದ್ಯುತ್‌ ಉಳಿತಾಯ ಆಗಲಿದೆ ಎಂಬ ಅಂಶ ಸಕಾರಾತ್ಮಕವಾಗಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT