ಬುಧವಾರ, ಸೆಪ್ಟೆಂಬರ್ 18, 2019
24 °C
ಜಿಲ್ಲಾ ಮಟ್ಟದ ಶಾಲಾ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ

ಸಿಂಥಟಿಕ್ ಮ್ಯಾಟ್ ಅಳವಡಿಸಿ ಪ್ರಥಮ ಪಂದ್ಯ

Published:
Updated:
Prajavani

ಪಡುಬಿದ್ರಿ: ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ ಮೊದಲ ಬಾರಿಗೆ ಸಿಂಥಟಿಕ್ ಮ್ಯಾಟ್ ಅಳವಡಿಸಿ ಪಡುಬಿದ್ರಿಯ ಸಾಗರ್ ವಿದ್ಯಾಮಂದಿರದಲ್ಲಿ ಶನಿವಾರ ನಡೆಯಿತು.

ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪಡುಬಿದ್ರಿ ಸಾಗರ ವಿದ್ಯಾ ಮಂದಿರ ಶಾಲೆ ಸಂಯುಕ್ತವಾಗಿ ಪಂದ್ಯಾಕೂಟವನ್ನು ಆಯೋಜಿಸಲಾಯಿತು.  ಬಾಲಕ - ಬಾಲಕಿಯರ ವಿಭಾಗಗಳಲ್ಲಿ ಬೈಂದೂರು, ಕುಂದಾಪುರ, ಕಾರ್ಕಳ, ಉಡುಪಿ, ಬ್ರಹ್ಮಾವರ ವಲಯಗಳ ಒಟ್ಟು 20 ತಂಡಗಳು ಭಾಗವಹಿಸಿದ್ದವು.

ಪಂದ್ಯಾಕೂಟ ಉದ್ಘಾಟಿಸಿದ ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಕಾಂತ ಪಡುಬಿದ್ರಿ, ಉತ್ತಮ ಕ್ರೀಡಾಪಟುಗಳಿಗೆ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಾಲೆಗಳು ಪ್ರೋತ್ಸಾಹ ನೀಡಬೇಕು ಎಂದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ‘ಪ್ರೊ-ಕಬಡ್ಡಿಯಿಂದಾಗಿ ಕಬಡ್ಡಿ ಕ್ರೀಡೆ ಇನ್ನಷ್ಟು ಜನಪ್ರಿಯವಾಗಿದ್ದು, ಸಾಕಷ್ಟು ಬದಲಾವಣೆಗಳನ್ನು ಕಂಡಿದೆ ಎಂದು ಹೇಳಿದರು.

ಕ್ರೀಡಾಪಟು ಶೀಬಾ ಕರ್ಕೇರ ಅವರನ್ನು ಸನ್ಮಾನಿಸಲಾಯಿತು. ಉದ್ಯಮಿ ಮನೋಹರ್ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನೀತಾ ಗುರುರಾಜ್ ಅಧ್ಯಕ್ಷತೆ ವಹಿಸಿದ್ದರು. ಪಡುಬಿದ್ರಿ ಬೀಡಿನ ಅರಸ ರತ್ನಾಕರ್ ರಾಜ್ ಕಿನ್ಯಕ್ಕ ಬಲ್ಲಾಳ್, ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ದಾನಿ ಗಾಯಿತ್ರಿ ರಾವ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶೇಷಶಯನ ಕಾರಿಂಜೆ, ಉಡುಪಿ, ಬ್ರಹ್ಮಾವರ, ಕುಂದಾಪುರ, ಬೈಂದೂರು, ಕಾರ್ಕಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ವಿಶ್ವನಾಥ ಬಾಯರಿ, ಭುಜಂಗ ಶೆಟ್ಟಿ, ದತ್ತಾತ್ರೇಯ ನಾಯಕ್, ಚಂದ್ರಶೇಖರ್ ಶೆಟ್ಟಿ, ಸಿದ್ದಪ್ಪ ಎಸ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಜಿಲ್ಲಾಧ್ಯಕ್ಷ ಸತ್ಯನಾರಾಯಣ, ಉಡುಪಿ ವಲಯ ಅಧ್ಯಕ್ಷ ಆಲ್ವಿನ್ ಅಂದ್ರಾದೆ, ಪ್ರಾಥಮಿಕ ಹಾಗೂ ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘ ಪ್ರಧಾನ ಕಾರ್ಯದರ್ಶಿ ಸುದರ್ಶನ ನಾಯಕ್, ಕೆನರಾ ಬ್ಯಾಂಕ್ ಪ್ರಬಂಧಕಿ ಸ್ವಾತಿ, ಸಾಗರ್ ವಿದ್ಯಾಮಂದಿರ ಶಾಲೆ ಸಂಚಾಲಕ ಸುಕುಮಾರ ಶ್ರೀಯಾನ್, ರಕ್ಷಕ ಸಂಘದ ಅಧ್ಯಕ್ಷ ಗಣೇಶ್ ಕೋಟ್ಯಾನ್ ಉಪಸ್ಥಿತರಿದ್ದರು. ಪ್ರಾಶುಪಾಲೆ ಪದ್ಮಶ್ರೀ ಸುರೇಶ್ ರಾವ್ ಸ್ವಾಗತಿಸಿದರು. ವಿನುತಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ನಿಕಿತಾ ವಂದಿಸಿದರು.

Post Comments (+)