ಶುಕ್ರವಾರ, ಆಗಸ್ಟ್ 12, 2022
22 °C

ಡಿ.ಎಸ್. ರಾಮಸ್ವಾಮಿಗೆ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಕೊಡಮಾಡುವ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಯು ಲೇಖಕ ಡಿ.ಎಸ್. ರಾಮಸ್ವಾಮಿ ಅವರಿಗೆ ಲಭಿಸಿದೆ.

ಡಿ.ಎಸ್. ರಾಮಸ್ವಾಮಿ ಅವರ ‘ಮೀನು ಬೇಟೆಗೆ ನಿಂತ ದೋಣಿ ಸಾಲು’ ಅಪ್ರಕಟಿತ ಕವನ ಸಂಕಲನವನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕವಿ, ಕಾದಂಬರಿಕಾರ, ನಾಟಕಕಾರ, ಕಥೆಗಾರ, ಪತ್ರಿಕೋದ್ಯಮಿ ಹೀಗೆ ಕನ್ನಡ ಸಾರಸ್ವತ ಲೋಕದಲ್ಲಿ ಹೆಸರುವಾಸಿಯಾದ ಕಡೆಂಗೋಡ್ಲು ಶಂಕರ ಭಟ್ಟರ ಹೆಸರಲ್ಲಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

ಡಿ.ಎಸ್. ರಾಮಸ್ವಾಮಿ ತರೀಕೆರೆಯವರಾಗಿದ್ದು, ಪ್ರಸ್ತುತ ಅರಸೀಕೆರೆ ಭಾರತೀಯ ಜೀವ ವಿಮಾ ನಿಗಮದಲ್ಲಿ ಆಡಳಿತಾಧಿಕಾರಿಯಾಗಿದ್ದಾರೆ. ಹಾಸನ, ಭದ್ರಾವತಿ ಮತ್ತು ಮೈಸೂರು ಆಕಾಶವಾಣಿಯಲ್ಲಿ ಅವರ 150ಕ್ಕೂ ಹೆಚ್ಚು ಚಿಂತನೆಗಳು ಪ್ರಸಾರವಾಗಿವೆ. ‘ಅಂಡಮಾನ್’ ಕುರಿತ ಪ್ರವಾಸ ಕಥನ ಧಾರಾವಾಹಿಯಾಗಿ ಪ್ರಸಾರಗೊಂಡಿತ್ತು. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಡಿ.ಸಿ. ಅನಂತಸ್ವಾಮಿ ಪ್ರಶಸ್ತಿ, ಶಿವಮೊಗ್ಗ ಕರ್ನಾಟಕ ಸಂಘದ ಪ್ರೊ.ಜಿ.ಎಸ್. ಶಿವರುದ್ರಪ್ಪ ಕಾವ್ಯ ಪ್ರಶಸ್ತಿ, ಕಾಂತಾವರ ಕನ್ನಡ ಸಂಘದ ಮುದ್ದಣ ಕಾವ್ಯ ಪ್ರಶಸ್ತಿ ಹಾಗೂ ವಿಭಾಕಾವ್ಯ ಪ್ರಶಸ್ತಿಗಳು ರಾಮಸ್ವಾಮಿ ಅವರಿಗೆ ಸಂದಿವೆ.

ಪ್ರಶಸ್ತಿಯು ₹ 10,000 ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು