ಗಿರೀಶ ಜಕಾಪುರೆಗೆ ‘ಕಡೆಂಗೋಡ್ಲು ಕಾವ್ಯ’ ಪ್ರಶಸ್ತಿ

ಭಾನುವಾರ, ಮೇ 26, 2019
30 °C

ಗಿರೀಶ ಜಕಾಪುರೆಗೆ ‘ಕಡೆಂಗೋಡ್ಲು ಕಾವ್ಯ’ ಪ್ರಶಸ್ತಿ

Published:
Updated:
Prajavani

ಉಡುಪಿ: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ (ಮಾಹೆ) ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಿಂದ ನೀಡುವ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ಗೆ ಬರಹಗಾರ ಗಿರೀಶ ಜಕಾಪುರೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಗಿರೀಶ ಜಕಾಪುರೆ ಅವರ ‘ಅಲ್ಲಮನ ಗಜಲ್‌ಗಳು’ ಅಪ್ರಕಟಿತ ಕವನ ಸಂಕಲನವನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕವಿ, ಕಾದಂಬರಿಕಾರ, ನಾಟಕಕಾರ, ಕಥೆಗಾರ, ಪತ್ರಿಕೋದ್ಯಮಿ ಹೀಗೆ ಕನ್ನಡ ಸಾರಸ್ವತ ಲೋಕದಲ್ಲಿ ಪ್ರಸಿದ್ಧವಾಗಿರುವ ಕಡೆಂಗೋಡ್ಲು ಶಂಕರ ಭಟ್ಟರ ಹೆಸರಲ್ಲಿ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದೇ ಆಗಸ್ಟ್‌ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರದ ಸಂಯೋಜಕ ಪ್ರೊ.ವರದೇಶ ಹಿರೇಗಂಗೆ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !