ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ.ಶ್ರೀಧರ ಆಚಾರ್ಯ ವಡೇರ ಹೋಬಳಿ ಅಧ್ಯಕ್ಷತೆ ವಹಿಸಿದ್ದರು. ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷ ಹರೀಶ್ ಆಚಾರ್ಯ, ಉದ್ಯಮಿ ಡಾ.ಜಿ. ರಾಮಕೃಷ್ಣ ಆಚಾರ್, ಬೆಂಗಳೂರು ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಡಾ.ಬಿ.ಎಂ.ಉಮೇಶ್ ಕುಮಾರ್, ರಥ ಶಿಲ್ಪಿ ರಾಜಗೋಪಾಲ ಆಚಾರ್ಯ ಕೋಟೇಶ್ವರ, ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಗೌರವ ಅಧ್ಯಕ್ಷ ಪಿ.ವಿ ಗಂಗಾಧರ ಆಚಾರ್ಯ, ದಿನೇಶ್ ಆಚಾರ್ಯ ಪಡುಬಿದ್ರಿ, ಅಸೆಟ್ ಅಧ್ಯಕ್ಷ ಬಿ.ಸೂರ್ಯಕುಮಾರ್ ಆಚಾರ್ಯ ಹಳೆಯಂಗಡಿ, ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿಯ ಅಧ್ಯಕ್ಷ ಗಣೇಶ್ ಆಚಾರ್ಯ ಕೆಮ್ಮಣ್ಣು, ಸರಸ್ವತೀ ಗೋವು ಪರ್ಯಾವರಣ್ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಬೆಳುವಾಯಿ ಸುಂದರ ಆಚಾರ್ಯ, ಸರಸ್ವತಿ ಮಾತೃ ಮಂಡಳಿ ಉಪಾಧ್ಯಕ್ಷೆ ರಮಾ ಅಚ್ಚುತ ಆಚಾರ್ಯ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಮೂಲ್ಕಿ ಮತ್ತಿತರರು ಭಾಗವಹಿಸಿದ್ದರು.