ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಳತ್ತೂರಿನ ಯೋಧ ಜಾರ್ಖಂಡ್‌ನಲ್ಲಿ ಸಾವು: ಅಂತ್ಯಕ್ರಿಯೆ

Last Updated 7 ನವೆಂಬರ್ 2021, 15:10 IST
ಅಕ್ಷರ ಗಾತ್ರ

ಶಿರ್ವ: ಜಾರ್ಖಂಡ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದ ಕಾಪು ತಾಲ್ಲೂಕು ಕಳತ್ತೂರು ಚಂದ್ರನಗರ ಕನ್ನಡರಬೆಟ್ಟುವಿನ ಯೋಧ ನವೀನ್ ಕುಮಾರ್ ಕರ್ಕಡ (50) ಅವರ ಅಂತ್ಯಕ್ರಿಯೆ ಭಾನುವಾರ ನೆರವೇರಿತು.

ಸಿಐಎಸ್ಎಫ್ ಯೋಧನಾಗಿ 29 ವರ್ಷಗಳಿಂದ ಸೇವಾ ನಿರತರಾಗಿದ್ದ ನವೀನ್ ಕುಮಾರ್ ಮುಂದಿನ ವರ್ಷ ನಿವೃತ್ತಿ ಹೊಂದಬೇಕಿತ್ತು. ಬಿಹಾರ, ರಾಂಚಿ, ದೆಹಲಿ, ಮೈಸೂರು, ನಾಗ್ಪುರ ಸೇರಿದಂತೆ ದೇಶದ ವಿವಿಧೆಡೆಗಳಲ್ಲಿರುವ ಸೇನಾ ನೆಲೆಗಳಲ್ಲಿ ಅವರು ಕರ್ತವ್ಯ ನಿರ್ವಹಿಸಿದ್ದರು.

ಜಾರ್ಖಂಡ್ ಸೇನಾ‌ ನೆಲೆಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಮೃತದೇಹವನ್ನು ತಂದು ಭಾನುವಾರ ಸಂಜೆ ಪಾದೂರು ಚರ್ಚ್‌ನಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ಮೃತ ಯೋಧನಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಸಮಾಜ ಸೇವಕ ಸುರೇಶ್ ಪಿ.ಶೆಟ್ಟಿ ಗುರ್ಮೆ ಸಹಿತ ಹಲವು ಗಣ್ಯರು, ಜನಪ್ರತಿನಿಧಿಗಳು ಸಂತಾಪ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT