ಪ್ರಶಸ್ತಿಯು ₹10 ಸಾವಿರ ನಗದು, ಬೆಳ್ಳಿ ತಟ್ಟೆ, ಪ್ರಶಸ್ತಿಪತ್ರ, ನೆನಪಿನ ಕಾಣಿಕೆ ಒಳಗೊಂಡಿದೆ. ಬೆಂಗಳೂರಿನ ಚಾಮರಾಜಪೇಟೆಯ ಉದಯಭಾನು ಸಭಾಂಗಣದಲ್ಲಿ ಅಕ್ಟೋಬರ್ 27ರಂದು ಸಂಜೆ 4ಕ್ಕೆ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಕಲಾಕದಂಬ ಆರ್ಟ್ ಸೆಂಟರ್ ನಿರ್ದೇಶಕ ಡಾ.ರಾಧಾಕೃಷ್ಣ ಉರಾಳ ತಿಳಿಸಿದ್ದಾರೆ.