ಇಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ತಿಳಿಸಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಅಂದು ಬೆಳಿಗ್ಗೆ 9ಕ್ಕೆ ಕಂಚಿನಡ್ಕದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸುವರು. 22ರಂದು ಯೋಜನೆ ರದ್ದುಪಡಿಸಲು ಒತ್ತಾಯಿಸಿ ಬೆಂಗಳೂರಿಗೆ ನಿಯೋಗ ತೆರಳಿ ಲೋಕೋಪಯೋಗಿ ಇಲಾಖೆ ಸಚಿವರಿಗೆ ಮನವಿ ಮಾಡಲಾಗುವುದು ಎಂದರು.