ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆರೆಮರೆಯ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ: ಸಚಿವ ಸುನಿಲ್ ಕುಮಾರ್

Last Updated 2 ಅಕ್ಟೋಬರ್ 2022, 15:57 IST
ಅಕ್ಷರ ಗಾತ್ರ

ಉಡುಪಿ: ತೆರೆಮರೆಯ ಸಾಧಕರನ್ನು ಗುರುತಿಸಿ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಆದಿ ಉಡುಪಿಯಲ್ಲಿ ₹ 5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಜಿಲ್ಲಾ ರಂಗ ಮಂದಿರ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ 9,823 ಅರ್ಜಿಗಳು ಬಂದಿದ್ದು, ಅರ್ಹ ಸಾಧಕರನ್ನು ಗುರುತಿಸಲು ಆಯ್ಕೆ ಸಮಿತಿ ರಚನೆಯಾಗಿದ್ದು, ಪ್ರಥಮ ಸಭೆ ಕೂಡಾ ಮುಗಿದಿದೆ. ಶೀಘ್ರ ಪ್ರಶಸ್ರಿಗೆ ಅಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.

ಈ ಬಾರಿಯೂ ‘ಮಾತಾಡು ಮಾತಾಡು ಕನ್ನಡ’ ಅಭಿಯಾನ ರಾಜ್ಯದಾದ್ಯಂತ ನಡೆಸಲು ತಯಾರಿ ನಡೆದಿದೆ. ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಆದ್ಯತೆ ದೊರೆಯಬೇಕು ಎಂಬ ಉದ್ದೇಶದಿಂದ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದ್ದು, ಇದರ ಸಾಧಕ ಬಾಧಕಗಳ ಕುರಿತು 2 ತಿಂಗಳೊಳಗೆ ಚರ್ಚಿಸಿ ಡಿಸೆಂಬರ್‌ನಲ್ಲಿ ನಡೆಯುವ ಅಧಿವೇಶನದಲ್ಲಿ ಅನುಮೋದನೆ ಪಡೆಯಲಾಗುವುದು ಎಂದರು.

ರಾಜ್ಯದ 13 ಜಿಲ್ಲೆಗಳಲ್ಲಿ ರಂಗಮಂದಿರಗಳು ಇಲ್ಲ. ಈ ಕೊರತೆ ನೀಗಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ತಲಾ ₹ 5 ಕೋಟಿ, ತಾಲ್ಲೂಕು ರಂಗ ಮಂದಿರಗಳ ನಿರ್ಮಾಣಕ್ಕೆ ₹ 2 ಕೋಟಿ ನೀಡಲಾಗುವುದು ಎಂದರು.

ಉಡುಪಿ ಜಿಲ್ಲೆಯಲ್ಲಿ ರಂಗ ಮಂದಿರ ನಿರ್ಮಾಣವಾಗಬೇಕು ಎಂಬ ಬಹುದಿನಗಳ ಬೇಡಿಕೆ ಈಡೇರುತ್ತಿದ್ದು, ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ. ಶೀಘ್ರ ಕಾಮಗಾರಿ ಮುಕ್ತಾಯಗೊಂಡು ಕಲಾಚಟುವಟಿಕೆಗಳು ನಡೆಯಲಿವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT