ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡದ ಉಳಿವು, ಬೆಳವಣಿಗೆಗಾಗಿ ಸಮಗ್ರ ಕನ್ನಡ ಭಾಷಾ ವಿಧೇಯಕ: ನಾಗಾಭರಣ

Last Updated 14 ಜೂನ್ 2022, 12:59 IST
ಅಕ್ಷರ ಗಾತ್ರ

ಉಡುಪಿ: ಕನ್ನಡ ಭಾಷೆ ಉಳಿಯಬೇಕು, ಬೆಳೆಯಬೇಕು ಎಂಬ ಸುದುದ್ದೇಶದಿಂದ ಸಮಗ್ರ ಕನ್ನಡ ಭಾಷಾ ವಿಧೇಯಕವನ್ನು ಸಿದ್ಧಪಡಿಸಲಾಗುತ್ತಿದ್ದು ಶೀಘ್ರವೇ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಟಿ.ಎಸ್. ನಾಗಾಭರಣ ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ‘ಸಮಸ್ಯೆಯನ್ನು ಮೂಲದಲ್ಲಿ ಗುರುತಿಸಿ ಸರಿಪಡಿಸುವ ಉದ್ದೇಶದಿಂದ ಸಮಗ್ರ ಕನ್ನಡ ಭಾಷಾ ವಿಧೇಯಕ ಸಿದ್ಧವಾಗುತ್ತಿದ್ದು, ಸರ್ಕಾರ ಜಾರಿಗೊಳಿಸಿದರೆ ಕನ್ನಡ ಭಾಷೆಗೆ, ಕನ್ನಡಿಗರಿಗೆ ಹಾಗೂ ಕರ್ನಾಟಕಕ್ಕೆ ಅದ್ಭುತವಾದ ಅಸ್ತ್ರ ಸಿಕ್ಕಂತಾಗುತ್ತದೆ ಎಂದರು.

ಸರೋಜಿನಿ ಮಹಿಷಿ ವರದಿಗೆ ಕಾನೂನಿನ ಚೌಕಟ್ಟಿಲ್ಲದ ಪರಿಣಾಮ ಅನುಷ್ಠಾನ ಸಾಧ್ಯವಾಗಿಲ್ಲ. ಯಾವುದೇ ವರದಿಗಳಿಗೆ ಕಾನೂನು ಹಾಗೂ ವಿಧೇಯಕದ ಚೌಕಟ್ಟು ಇರಬೇಕು. ಇಲ್ಲದಿದ್ದರೆ ನಿಯಮಗಳ ಪಾಲನೆ ಸಾಧ್ಯವಿಲ್ಲ ಎಂದು ನಾಗಾಭರಣ ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT