ಉಡುಪಿ: ಜಿಲ್ಲೆಯ ಐತಿಹಾಸಿಕ ತಾಣಗಳಲ್ಲಿ ಅಲ್ಲಿನ ಮಾಹಿತಿಯನ್ನು ಕನ್ನಡ ಭಾಷೆಯಲ್ಲಿ ಪ್ರದರ್ಶಿಸಬೇಕು. ಪ್ರವಾಸಿ ತಾಣಗಳಲ್ಲೂ ಕನ್ನಡ ನಾಮಫಲಕ ಸ್ಥಾಪಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಲ್ಪೆ ಬೀಚ್ಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಾಶಸ್ತ್ಯ ದೊರೆತಿದ್ದರೂ ಅಲ್ಲಿನ ನಾಮಫಲಕಗಳು ಕನ್ನಡ ಭಾಷೆಯಲ್ಲಿ ಇಲ್ಲ. ಈ ಬಗ್ಗೆ ಸ್ಥಳೀಯ ಸಂಸ್ಥೆಗಳು ಹಾಗೂ ಪ್ರವಾಸೋದ್ಯಮ ಇಲಾಖೆಯವರು ಗಮನಹರಿಸಿ ಕಡ್ಡಾಯವಾಗಿ ಕನ್ನಡದಲ್ಲಿ ನಾಮಫಲಕ ಅಳವಡಿಸಲು ಕ್ರಮ ವಹಿಸಬೇಕು ಎಂದರು.

ಆಡಳಿತದಲ್ಲಿ ಕನ್ನಡ ಭಾಷೆಯು ಶೇ 100ರಷ್ಟು ಅನುಷ್ಠಾನವಾಗಬೇಕು. ಕನ್ನಡ ಭಾಷೆಯ ಬಳಕೆ ನಿರಂತರವಾಗಿರಲು ಒತ್ತು ನೀಡಬೇಕು. ಭಾಷೆ ಉಳಿವಿಗಾಗಿ ಹೆಚ್ಚು ಸಂವೇದನಾಶೀಲತೆಯಿಂದ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಹೇಳಿದರು.

ಕನ್ನಡ ಪರ ಹೋರಾಟ ನಡೆಸಿದ ಕನ್ನಡ ಪರ ಸಂಘಟನೆಗಳ ಸದಸ್ಯರ ಮೇಲೆ ಹಾಕಿರುವ ಪ್ರಕರಣಗಳನ್ನು ವಾಪಸ್ ಪಡೆಯಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕು ಎಂದರು.

ಜಿಲ್ಲೆಗೆ ಶಿಕ್ಷಣ, ಉದ್ಯೋಗಕ್ಕಾಗಿ ಬಂದ ಹೊರರಾಜ್ಯದ ಕನ್ನಡೇತರರು ಕನ್ನಡ ಕಲಿಯಲು ಉತ್ಸುಕರಾಗಿದ್ದರೆ ಕನ್ನಡ ಪ್ರಾಧಿಕಾರದ ವತಿಯಿಂದ ಕಲಿಕಾ ಕೇಂದ್ರಗಳನ್ನು ತೆರೆದು ಕನ್ನಡವನ್ನು ಕಲಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯ ವಾಣಿಜ್ಯ ಕೇಂದ್ರಗಳು ಹಾಗೂ ಕೈಗಾರಿಕಾ ಕೇಂದ್ರಗಳ ಮುಂಭಾಗದ ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಭಾಷೆಯಲ್ಲಿ ಹಾಗೂ ಶೇ 40ರಷ್ಟು ಇತರ ಭಾಷೆಯಲ್ಲಿ ಅಳವಡಿಸಲು ಕ್ರಮವಹಿಸಬೇಕು ಎಂದರು.

ಕೆಲವು ಪ್ರಾಥಮಿಕ ಶಾಲಾ ಮಕ್ಕಳು ಕನ್ನಡ ಭಾಷೆಯ ಅಕ್ಷರಗಳನ್ನು ಗುರುತಿಸುವ ಪರಿಸ್ಥಿತಿಯಲ್ಲಿ ಇಲ್ಲ. ಶಿಕ್ಷಕರು ಗುಣಮಟ್ಟದ ಶಿಕ್ಷಣವನ್ನು ನೀಡುವಂತಾಗಬೇಕು. ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಕನ್ನಡ ಭಾಷಾ ಪರೀಕ್ಷೆಯಲ್ಲಿ ಹೆಚ್ಚಿನವರು ಉತ್ತೀರ್ಣರಾಗಿದ್ದಾರೆ. ಆದರೆ, ಕೆಲವು ವಿದ್ಯಾರ್ಥಿಗಳು ತಮ್ಮ ಮಾತೃಭಾಷೆ ಕನ್ನಡವಾಗಿದ್ದರೂ ಅನುತ್ತೀರ್ಣರಾಗಿದ್ದಾರೆ. ಅದಕ್ಕೆ ಕಾರಣವನ್ನು ಕಂಡುಕೊಳ್ಳಬೇಕಿದೆ ಎಂದು ಹೇಳಿದರು.

ಆಸ್ಪತ್ರೆಗಳಲ್ಲಿ ಮರಣೋತ್ತರ ಪರೀಕ್ಷೆಯ ವರದಿಗಳು ಅದಷ್ಟು ಕನ್ನಡದಲ್ಲಿಯೇ ಇರುವ ಹಾಗೆ ಕ್ರಮವಹಿಸಬೇಕು. ಕಡ್ಡಾಯವಾಗಿ ರೋಗಿಗಳ ಹೆಸರನ್ನು ಕನ್ನಡದಲ್ಲಿಯೇ ನಮೂದು ಮಾಡಬೇಕು. ವೈದ್ಯರೂ ಕನ್ನಡ ಭಾಷಾಭಿಮಾನವನ್ನು ಬೆಳೆಸಿಕೊಳ್ಳುಬೇಕು ಎಂದರು.

ಬ್ಯಾಂಕ್ಗಳಲ್ಲಿ ಕಡ್ಡಾಯವಾಗಿ ಸ್ಥಳೀಯ ಭಾಷೆಯನ್ನು ಮಾತನಾಡುವವರನ್ನು ಉದ್ಯೋಗಕ್ಕೆ ನೇಮಿಸಿಕೊಳ್ಳುವುದು ಉತ್ತಮ. ಇದರಿಂದ ಸ್ಥಳೀಯ ಜನರು ದೈನಂದಿನ ಬ್ಯಾಂಕಿಂಗ್ ವ್ಯವಹಾರಗಳನ್ನು ಸರಳವಾಗಿ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ಈ ಬಗ್ಗೆ ಲೀಡ್ ಬ್ಯಾಂಕ್ ಸಭೆ ನಡೆಸಿ, ಇತರ ಬ್ಯಾಂಕ್ಗಳಿಗೆ ಸೂಚನೆ ನೀಡಬೇಕು ಎಂದರು.

ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ್ ಹಾನ್ಗಲ್, ಸದಸ್ಯ ಯಾಕೂಬ್ ಖಾದರ್ ಗುಲ್ವಾಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಅಪ್ತ ಕಾರ್ಯದರ್ಶಿ ಫಣಿ ಕುಮಾರ್ ಭಾಗವಹಿಸಿದ್ದರು.

ಜಿಲ್ಲಾಡಳಿತದಲ್ಲಿ ಕನ್ನಡ ಅನುಷ್ಠಾನ ಸಮರ್ಪಕವಾಗಿ ಅಗುತ್ತಿದೆ. ಅದನ್ನು ಇನ್ನಷ್ಟು ಹೆಚ್ಚಿಸಲು ಪ್ರತಿಯೊಬ್ಬ ಅಧಿಕಾರಿಗಳೂ ಮುಂದಾಗಬೇಕು ಸ್ವರೂಪ
ಟಿ.ಕೆ. ಜಿಲ್ಲಾಧಿಕಾರಿ

‘ಜಿಲ್ಲೆಯ 8 ಸರ್ಕಾರಿ ಶಾಲೆಗಳಿಗೆ ಹಕ್ಕು ಪತ್ರಗಳಿಲ್ಲ’

ಉಡುಪಿ ಜಿಲ್ಲೆಯಲ್ಲೂ ಎಂಟು ಸರ್ಕಾರಿ ಶಾಲೆಗಳಿಗೆ ಹಕ್ಕುಪತ್ರಗಳಿಲ್ಲ. ಮುಂದಿನ ಮೂರು ತಿಂಗಳೊಳಗೆ ಈ ಶಾಲೆಗಳಿಗೆ ಹಕ್ಕುಪತ್ರ ಸಿದ್ಧಪಡಿಸಿಕೊಳ್ಳಬೇಕು ಎಂದು ಪುರುಷೋತ್ತಮ ಬಿಳಿಮಲೆ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೂ ಹಕ್ಕುಪತ್ರ ಆಗಬೇಕು ಎಂದು ನಾವು ಸರ್ಕಾರವನ್ನು ಒತ್ತಾಯಿಸಿದ್ದೇವೆ ಎಂದರು. ನಾಮಫಲಕದಲ್ಲಿ ಕನ್ನಡ ಸೇರಿದಂತೆ ವಿವಿಧ ವಿಚಾರಗಳಿಗೆ ಸಂಬಂಧಿಸಿ ಕನ್ನಡ ಪರ ಸಂಘಟನೆಗಳು ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಸಮಸ್ಯೆಗಳನ್ನು ಜಿಲ್ಲಾಧಿಕಾರಿ ಗಮನಕ್ಕೆ ತರಬೇಕು. ಜಿಲ್ಲಾಧಿಕಾರಿಯೂ ಮೂರು ತಿಂಗಳಿಗೊಮ್ಮೆ ಕನ್ನಡಪರ ಸಂಘಟನೆಯವರ ಜೊತೆ ಸಭೆ ನಡೆಸಬೇಕೆಂದು ತಿಳಿಸಿರುವುದಾಗಿ ಹೇಳಿದರು. ಕೆಡಿಪಿ ಸಭೆಗಳಲ್ಲೂ ಕನ್ನಡಕ್ಕೆ ಸಂಬಂಧಿಸಿದ ವಿಚಾರಗಳನ್ನು ಸಭೆಯ ಆರಂಭದಲ್ಲಿ ಚರ್ಚಿಸಬೇಕು ಎಂದು ಸೂಚಿಸಿದ್ದೇನೆ ಎಂದರು. ರಾಜ್ಯದಲ್ಲಿ 230 ಸಣ್ಣ ಭಾಷೆಗಳಿವೆ. ಅವುಗಳ ಸಬಲೀಕರಣಕ್ಕೆ ಸಮಿತಿಯೊಂದು ಕೆಲಸ ಮಾಡುತ್ತಿದೆ. ಕರ್ನಾಟಕಕ್ಕೆ ಭಾಷಾ ನೀತಿ ಬೇಕು. ಹಾಗಾದರೆ ಭಾಷೆಯ ಬೆಳವಣಿಗೆಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.