ಉಡುಪಿ: ಜಿಲ್ಲಾ ಮಟ್ಟದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆ ಹಾಗೂ ವೈಭವಯುತವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1ರಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಿಗ್ಗೆ 9ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ ಎಂದರು.

ಪೊಲೀಸ್, ಅಬಕಾರಿ, ಅರಣ್ಯ, ಗೃಹ ರಕ್ಷಕ, ಎನ್.ಎಸ್.ಎಸ್, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದ್ದು, ನಂತರದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಗುಂಪು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ಗಣ್ಯರಿಗೆ ಸನ್ಮಾನ ನಡೆಯಲಿದೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ 8ಗಂಟೆಗೆ ನಗರದ ಬೋರ್ಡ್ ಹೈಸ್ಕೂಲ್ನಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ನಂತರ ಅಜ್ಜರಕಾಡು ಕ್ರೀಡಾಂಗಣದವರೆಗೆ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಕರ್ನಾಟಕ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಯ ಯೋಜನೆಗಳನ್ನು ಸಾರುವ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಇರಲಿವೆ ಎಂದರು.

ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದರೊಂದಿಗೆ ಭಾಗವಹಿಸುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.