ಉಡುಪಿ: ಜಗತ್ತಿನಲ್ಲಿಯೇ ಅಪರೂಪದ ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಂಪತ್ತು ಹೊಂದಿರುವ ಕನ್ನಡ ಭಾಷೆಯ ಬಗ್ಗೆ ಹೆಚ್ಚು ತಿಳಿದುಕೊಂಡು ಎಲ್ಲೆಡೆ ಕನ್ನಡದ ಕಂಪು ಹರಡೋಣ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಪಿ. ರವಿರಾಜ್ ಕರೆ ನೀಡಿದರು.

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಚುಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮುಖಂಡ ಜಯಕರ್ ಶೆಟ್ಟಿ ಮಾತನಾಡಿ, ‘ನಿಸ್ವಾರ್ಥ ಸೇವೆಯಿಂದ ಮಾತ್ರ ಯಶಸ್ಸು ಪಡೆಯಲು ಸಾಧ್ಯ. ಪ್ರತಿಫಲ ಬಯಸದೆ ಮಾಡುವ ಪ್ರತಿ ಸೇವೆಯೂ ಬದುಕಿನಲ್ಲಿ ದಾರಿದೀಪವಾಗಲಿದೆ’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಡಾ.ಸುಕನ್ಯಾ ಮೇರಿ ಶುಭಹಾರೈಸಿದರು. ಸಾಹಿತಿ, ಪತ್ರಕರ್ತ ಜನಾರ್ದನ ಕೊಡವೂರು, ರಾಷ್ಟ್ರೀಯ ಸೇವಾ ಘಟಕಗಳ ಯೋಜನಾಧಿಕಾರಿ ಚಿರಂಜನ್ ಕೆ.ಶೇರಿಗಾರ್, ವಿದ್ಯಾರ್ಥಿ ಪ್ರತಿನಿಧಿಗಳಾದ ಶ್ರೀಜಾ, ದಿಶಾ, ಚೈತನ್ಯ, ದೀಪಕ್ ಇದ್ದರು. ವಿದ್ಯಾರ್ಥಿ ಸಂಘದ ನಾಯಕಿ ಸೌಜನ್ಯಾ ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಪ್ರಜ್ಞಾ ಮಾರ್ಪಳ್ಳಿ ವಂದಿಸಿದರು. ಸಿಂಚನಾ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.