ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ ಕಾರ್ಯ ಅವಿಸ್ಮರಣೀಯ

Last Updated 5 ಮೇ 2022, 14:07 IST
ಅಕ್ಷರ ಗಾತ್ರ

ಉಡುಪಿ: ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸುತ್ತಿರುವ ಅತಿದೊಡ್ಡ ಸ್ವಾಯತ್ತ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ ಕಾರ್ಯ ಅವಿಸ್ಮರಣೀಯ ಎಂದು ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ. ಜಗದೀಶ್ ಶೆಟ್ಟಿ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲ್ಲೂಕು ಘಟಕ, ಯಕ್ಷಗಾನ ಕೇಂದ್ರ ಇಂದ್ರಾಳಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಸಾಪ ಸ್ಥಾಪನಾ ದಿನಾಚರಣೆ ಹಾಗೂ ಯಕ್ಷ ಪ್ರೇಮಿ ನಾರಾಯಣ ಸಂಸ್ಮರಣಾರ್ಥ ನೀಡುವ ದತ್ತಿ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಭಾಷೆಯ ಜೊತೆಗೆ ಏಕೀಕರಣಕ್ಕೆ ಒತ್ತು ನೀಡಿದ ಪರಿಣಾಮ ಪ್ರಸ್ತುತ ಉತ್ತಮ ನಾಡನ್ನು ಕಾಣುವಂತಾಗಿದೆ. ಸಾಹಿತ್ಯ ಸಮ್ಮೇಳನಗಳು ನಾಡಿನ ವಿವಿಧ ವಿಚಾರಗಳನ್ನು ಜನರಿಗೆ ತಲುಪಿಸುವಲ್ಲಿ ಮಹತ್ತರ ಕೆಲಸ ಮಾಡುತ್ತಿವೆ ಎಂದರು.

ಕಾರ್ಯಕ್ರಮದಲ್ಲಿ ಯಕ್ಷಗಾನ ಕೇಂದ್ರದ ಗುರುಗಳಾದ ಕೃಷ್ಣಮೂತಿ೯ ಭಟ್ ಅವರಿಗೆ ದತ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು. ಹಿರಿಯ ನಾಗರಿಕ ವೇದಿಕೆಯ ಅದ್ಯಕ್ಷ ಸಿ.ಎಸ್.ರಾವ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವ ಅಧ್ಯಕ್ಷ ವಿಶ್ವನಾಥ್ ಶೆಣೈ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಮಣ್ಯ ಶೆಟ್ಟಿ ಭಾಗವಹಿಸಿದ್ದರು. ಕಸಾಪ ತಾಲ್ಲೂಕು ಘಟಕ ಅಧ್ಯಕ್ಷ ಎಚ್‌.ಪಿ.ರವಿರಾಜ್ ಅಧ್ಯಕ್ಷತೆ ವಹಿಸಿದ್ದರು.

ಗೌರವ ಕಾರ್ಯದರ್ಶಿ ರಂಜಿನಿ ವಸಂತ್ ಸ್ವಾಗತಿಸಿದರು. ರಾಜೇಶ್ ಭಟ್ ಪಣಿಯಾಡಿ ಅತಿಥಿಗಳನ್ನು ಪರಿಚಯಿಸಿದರು. ಗೌರವ ಕಾರ್ಯದರ್ಶಿ ಜನರ್ಧನ್ ಕೊಡವೂರ್ ವಂದಿಸಿದರು. ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮ ನಿರೂಪಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT