ಶಿರ್ವ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನ್ನಡ ಅಭಿಮಾನ ಹೊಸತಲ್ಲ. ಈಗಿನ ಮಕ್ಕಳಲ್ಲಿ ಕನ್ನಡದ ಬಗ್ಗೆ ಕೇಳಿದಾಗ ಐ ಡೋಂಟ್ ನೊ ಕನ್ನಡ ಹೇಳುವುದನ್ನು ಹೇಗೆ ಬದಲಾಯಿಸಬಹುದು ಅನ್ನುವ ಮಟ್ಟಿಗೆ ಕನ್ನಡದ ಕೆಲಸ ಮಾಡಬೇಕಾಗಿದೆ. ಕನ್ನಡದ ವೈಭವವನ್ನು ಮತ್ತೆ ಸ್ಥಾಪಿಸುವ ಬಗ್ಗೆ ಕಟಿಬದ್ಧರಾಗಬೇಕು ಎಂದು ಕಾಪು ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ, ಸಾಮಾಜಿಕ ಹೋರಾಟಗಾರ ಫಕೀರ್ ಮುಹಮ್ಮದ್ ಕಟ್ಪಾಡಿ ಹೇಳಿದರು.

ಅವರು ಕಟಪಾಡಿಯ ಸ್ವಗೃಹದಲ್ಲಿ ಸಮ್ಮೇಳನದ ಸಮಿತಿ ವತಿಯಿಂದ ಅಧಿಕೃತವಾಗಿ ನೀಡಿದ ಆಮಂತ್ರಣ ಸ್ವೀಕರಿಸಿ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಕಾಪು ತಾಲ್ಲೂಕು ಘಟಕದ ವತಿಯಿಂದ ಫಕೀರ್ ಮುಹಮ್ಮದ್ ದಂಪತಿಯನ್ನು ಸನ್ಮಾನಿಸಲಾಯಿತು.

ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಮೀಳಾ ಜತ್ತನ್ನ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿದರು. ತಾಲ್ಲೂಕು ಘಟಕದ ಅಧ್ಯಕ್ಷ ಬಿ. ಪುಂಡಲೀಕ ಮರಾಠೆ, ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಾಣೇಶ್ ಹೆಜಮಾಡಿ, ಸ್ವಾಗತ ಸಮಿತಿ ಉಪಾಧ್ಯಕ್ಷ ಮೋಹನ ಸುವರ್ಣ, ಕಸಾಪ ಜಿಲ್ಲಾ ಸಹ ಕಾರ್ಯದರ್ಶಿ ರಘು ನಾಯ್ಕ್, ಜೊತೆ ಕಾರ್ಯದರ್ಶಿ ಕೃಷ್ಣಕುಮಾರ್ ರಾವ್ ಮಟ್ಟು, ಸಂಘಟನಾ ಕಾರ್ಯದರ್ಶಿಗಳಾದ ಕೆ.ಆರ್.ಪಾಟ್ಕರ್ ಬಂಟಕಲ್ಲು, ದೀಪಕ್ ಬೀರ ಪಡುಬಿದ್ರಿ, ಸಮಿತಿ ಸದಸ್ಯರಾದ ಸತ್ಯಸಾಯಿ ಪ್ರಸಾದ್ ಬಂಟಕಲ್ಲು, ಭಾಸ್ಕರ ಕಾಮತ್ ಕಟಪಾಡಿ, ಫಕೀರ್ ಮುಹಮ್ಮದ್ ಕುಟುಂಬಸ್ಥರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.